BC Patil
ಇಂದು ಸಚಿವ ಹಾಗೂ ನಟ ಬಿಸಿ ಪಾಟೀಲ್ ಅವರಿಗೆ ಹುಟ್ಟುಹಹಬ್ಬದ ಸಂಭ್ರಮ. ಹೀಗಾಗಿ ಬಿಸಿ ಪಾಟೀಲ್ ಅವರಿಗೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳನ್ನ ತಿಳಿಸಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ
ಸಿಎಂ ಬಿ ಎಸ್ ಯಡಿಯೂರಪ್ಪನವರು ಟ್ವೀಟ್ ಮಾಡುವ ಮೂಲಕ ‘ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ’ ಎಂದು ಶುಭಾಶಯ ತಿಳಿಸಿದ್ದಾರೆ.

ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು ಅವರು ‘ಸಂಪುಟ ಸಹೋದ್ಯೋಗಿ ಹಾಗೂ ಆಪ್ತರಾದ ಶ್ರೀ ಬಿ ಸಿ ಪಾಟೀಲ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಹಾಗೂ ಆಯುಷ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಸುಧಾಕರ್ ಅವರು ‘ಆತ್ಮೀಯ ಮಿತ್ರರು, ಸಂಪುಟ ಸಹೋದ್ಯೋಗಿಗಳಾದ ಶ್ರೀ ಬಿ.ಸಿ.ಪಾಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಹಾರೈಸುತ್ತೇನೆ’ ಎಂದು ಹಾರೈಸಿದ್ದಾರೆ.
BC Patil
ದೀಪಗಳ ಹಬ್ಬ ದೀಪಾವಳಿ ಹಬ್ಬ..! ವಿಶೇಷತೆಗಳು, ಪುರಾಣ ಇತಿಹಾಸಗಳು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








