ಪಾಟ್ನಾ: ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 125 ಸ್ಥಾನ ಗೆಲ್ಲುವುದರೊಂದಿಗೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ.
ಭಾನುವಾರ ನಡೆದ ಎನ್‍ಡಿಎ ಮೈತ್ರಿಕೂಟದ ಶಾಸಕಾಂಗ ಸಭೆಯಲ್ಲಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೆ ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡಲಾಯಿತು. ಇದರೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗೆ ಕಡಿಮೆ ಮತ ಬಂದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸಿಎಂ ಪಟ್ಟ ಕೈತಪ್ಪಬಹುದು ಎಂದು ಹರಿದಾಡುತ್ತಿದ್ದ ವದಂತಿಗೆ ತೆರೆ ಬಿದ್ದಿದೆ.

ಫಲಿತಾಂಶ ಏನೇ ಬಂದರೂ ನಿತೀಶ್ ಕುಮಾರ್ ಅವರೇ ಸಿಎಂ ಎಂದು ಚುನಾವಣಾ ಪ್ರಚಾರದ ಹೇಳಿದ್ದ ಬಿಜೆಪಿ ತನ್ನ ಮಾತು ಉಳಿಸಿಕೊಂಡಿದ್ದು, ಸೋಮವಾರ ಸಂಜೆ ರಾಜಭವನದಲ್ಲಿ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎನ್‍ಡಿಎ ಸಭೆಗೂ ಮುನ್ನ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ನಾಯಕರನ್ನಾಗಿ ಆರಿಸಲಾಯಿತು. ಬಳಿಕ ಅವರ ಮನೆಯಲ್ಲೇ ಎನ್‍ಡಿಎ ಮೈತ್ರಿಕೂಟದ ಸಭೆ ನಡೆದು ಒಮ್ಮತದಿಂದ ಅವರನ್ನ ಸಿಎಂ ಆಗಿ ಆಯ್ಕೆ ಮಾಡಲಾಯಿತು.

ಅಕ್ಟೋಬರ್ 28ರಿಂದ ನವೆಂಬರ್ 7ರವರೆಗೆ ಮೂರು ಹಂತದಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್ 10ರಂದು ಪ್ರಕಟಗೊಂಡಿದೆ. 243 ಕ್ಷೇತ್ರಗಳ ಪೈಕಿ ಎನ್‍ಡಿಎ ಮೈತ್ರಿಕೂಟ 125 ಸ್ಥಾನಗಳನ್ನ ಗೆದ್ದು ಸರಳ ಬಹುಮತ ಪಡೆದಿದೆ. RJD ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ 110 ಕ್ಷೇತ್ರಗಳನ್ನ ಗೆಲ್ಲುವಲ್ಲಿ ತೃಪ್ತಿಪಟ್ಟುಕೊಂಡಿದೆ. ಈ ಹಿಂದಿನಂತೆ ಡಿಸಿಎಂ ಆಗಿ ಬಿಜೆಪಿಯ ಸುಶೀಲ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








