ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಬೆಂಕಿ ರಾಜ’ ಅಂದರ್: ಬೆಂಗಳೂರಿನಲ್ಲಿ ಸಿಸಿಬಿ ಖೆಡ್ಡಾಕ್ಕೆ ಬಿದ್ದ ಸಂಪತ್ ರಾಜ್..!

Kariyappa N by Kariyappa N
November 17, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಬೆಂಗಳೂರು: ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಗಲಭೆಯ ಕಿಂಗ್‍ಪಿನ್ ಹಾಗೂ ಕುಮ್ಮಕ್ಕು ನೀಡಿದ ಆರೋಪ ಹೊತ್ತಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೀಡಿದ್ದ ನೋಟಿಸ್ ನಂತರ ಬಂಧನದ ಭೀತಿಯಿಂದ ಕಳೆದ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್‍ರನ್ನು ಬೆಂಗಳೂರಿನಲ್ಲೇ ಅರೆಸ್ಟ್ ಮಾಡಲಾಗಿದೆ.


ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಂಪತ್ ರಾಜ್ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಸಂಪತ್‍ರಾಜ್‍ಗೆ 2ನೇ ಬಾರಿ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದರು. ಆದರೆ, ಕೊರೊನಾ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ್ದರಿಂದ ವಿಚಾರಣೆಗೆ ಗೈರು ಹಾಜರಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪತ್ ರಾಜ್ ಮೇಲೆ ಸಿಸಿಬಿ ಪೊಲೀಸರು ನಿಗಾ ಇಟ್ಟಿದ್ದರು. ಆದರೆ, ಸಿಸಿಬಿ ಪೊಲೀಸರಿಗೆ ಚಳ್ಳಹಣ್ಣು ತಿನ್ನಿಸಿ ಡಿಶ್ಚಾರ್ಜ್ ಮಾಡಿಸಿಕೊಂಡು ಸಂಪತ್ ರಾಜ್ ನಾಪತ್ತೆಯಾಗಿದ್ದರು.
ಕಳೆದ ಒಂದು ತಿಂಗಳಿಂದ ಬೆಂಗಳೂರು, ಮೈಸೂರು, ನಾಗರಹೊಳೆ, ಕೇರಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಜಾಗ ಬದಲಾಯಿಸುತ್ತಿದ್ದ ಸಂಪತ್ ರಾಜ್ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಸಂಪತ್ ರಾಜ್ ಬಂಧನವಾದ ವಿಚಾರವಾಗಿ ಹೈಕೋರ್ಟ್ ಸಿಸಿಬಿ ಪೊಲೀಸರ ಮೇಲೆ ಗರಂ ಆಗಿತ್ತು.


ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂಟ್ರಾಕ್ಟರ್ ಹಾಗೂ ನಾಗರಹೊಳೆ ಮೂಲದ ರಿಯಾಜುದ್ದೀನ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ರಿಯಾಜುದ್ದೀನ್ ಬಂಧಿಸಿ ವಿಚಾರಣೆ ಸಂಪತ್ ರಾಜ್ ಚಲನವನಗಳ ಬಗ್ಗೆ ಮಾಹಿತಿ ಪಡೆದು ರಾಜಧಾನಿ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ರಿಯಾಜುದ್ದೀನ್, ಸಂಪತ್ ರಾಜ್ ನಾಗರಹೊಳೆಯಲ್ಲಿ ಅಡಗಿಕೊಳ್ಳಲು ಸಹಾಯ ನೀಡಿದ್ದ. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ರಿಯಾಜುದ್ದೀನ್ ಶಿಷ್ಯರ ಜೊತೆ ಸಂಪತ್‍ರಾಜ್ ಓಡಾಡಿಕೊಂಡು ತಲೆಮರೆಸಿಕೊಂಡಿದ್ದ.
ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ವಜಾಗೊಂಡ ಹಿನ್ನೆಲೆಯಲ್ಲಿ ಸಂಪತ್ ರಾಜ್ ಸಿಸಿಬಿ ಪೊಲೀಸರಿಗೆ ಸಿಗದೇ ನಾಪತ್ತೆಯಾಗಿದ್ದರು. ಸೋಮವರ ರಾತ್ರಿ ಸಂಪತ್ ರಾಜ್‍ರನ್ನು ಬಂಧಿಸಿದ್ದು, ಸಿಸಿಬಿ ಪೊಲೀಸರು ಮಂಗಳವಾರ ಕೋರ್ಟ್‍ಗೆ ಹಾಜರುಪಡಿಸಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಈ ದಿನಕ್ಕಾಗಿ ನಾನು ಕಾದಿದ್ದೆ: ಶಾಸಕ ಅಖಂಡ ಹೇಳಿಕೆ
ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಹಾಗೂ ತಮ್ಮ ಮನೆಗೆ ಬೆಂಕಿ ಹಚ್ಚಿ ಹತ್ಯೆಗೆ ಸಂಚು ರೂಪಿಸಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ ಮಾಡಿದ್ದು ಸಮಾಧಾನ ತಂದಿದೆ ಎಂದು ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯಿಸಿದ್ದಾರೆ.


ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು, ಈ ದಿನಕ್ಕಾಗಿ ನಾನು ಕಾದಿದ್ದೆ ಎಂದ ಅಖಂಡ ಶ್ರೀನಿವಾಸಮೂರ್ತಿ, ಪಕ್ಷದಿಂದಲೂ ಸಂಪತ್ ರಾಜ್ ವಿರುದ್ಧ ಕ್ರಮ ಆಗಬೇಕು. ಈ ಸಂಬಂಧ ಕೆಪಿಸಿಸಿ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಮಾತನಾಡುವೆ ಎಂದು
ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ccb policed.je halliex mayork.je halli roitmissing one monthsampath raj arrest
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram