ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಾದ್ಯಂತ ಡಿಗ್ರಿ ಕಾಲೇಜ್ ಓಪನ್; ಬೆಂಗಳೂರಲ್ಲಿ ಸ್ಟೂಡೆಂಟ್ಸ್ ಉತ್ಸಾಹ..ಜಿಲ್ಲೆಗಳಲ್ಲಿ ನೀರಸ..!

Kariyappa N by Kariyappa N
November 17, 2020
in Newsbeat, Samagra karnataka, ರಾಜ್ಯ
colleges
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊರೊನಾ ರಣಕೇಕೆ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಹಾಗೂ ಮೆಡಿಕಲ್ ಕಾಲೇಜುಗಳು 8 ತಿಂಗಳ ಬಳಿಕ ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿವೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಡಿಗ್ರಿ ಕಾಲೇಜುಗಳು ಓಪನ್ ಆಗಿದ್ದು, ಕಟ್ಟುನಿಟ್ಟಿನ ಕೊರೊನಾ ಗೈಡ್‍ಲೈನ್ಸ್ ನಡುವೆ ತರಗತಿಗಳನ್ನು ಆರಂಭಸಲಾಗಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಹೆಜ್ಜೆ ಹಾಕಿದ್ರೆ, ಬಹುತೇಕ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಕಾಲೇಜುಗಳು ಆರಂಭವಾಗಿ ಮೊದಲ ದಿನವಾದ್ದರಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಅದರಲ್ಲೂ ಅಂತಿಮ(ಫೈನಲ್) ವರ್ಷದ ಪದವಿ, ಇಂಜಿನಿಯರಿಂಗ್, ಮೆಡಿಕಲ್ ತರಗತಿಗಳನ್ನು ಮಾತ್ರ ಅರಂಭಿಸಿದ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ.
ಕೊರೊನಾ ಟೆಸ್ಟ್ ರಿಪೋರ್ಟ್‍ನಲ್ಲಿ ನೆಗೆಟಿವ್ ಇದ್ದ ವಿದ್ಯಾರ್ಥಿಗಳನ್ನು ಮಾತ್ರ ತರಗತಿಗಳಿಗೆ ಸೇರಿಸಲಾಗುತ್ತಿತ್ತು. ಕಾಲೇಜು ಆವರಣ ಪ್ರವೇಶಕ್ಕೂ ಮೊದಲು ಥರ್ಮಲ್ ಟೆಸ್ಟ್ ಮಾಡಿ, ಮಾಸ್ಕ್ ಧರಿಸಿದ್ದನ್ನು ಖಚಿತಪಡಿಸಿದ ಬಳಿಕವೇ ವಿದ್ಯಾರ್ಥಿಗಳನ್ನು ಕೊಠಡಿಗಳ ಒಳಗೆ ಬಿಡಲಾಯಿತು.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026


ಬೆಂಗಳೂರಿನ ಮಹಾರಾಣಿ ಕಾಲೇಜಿಗೆ ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಆಗಮಿಸಿದ್ದು, ಕೊರೊನಾ ಟೆಸ್ಟ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂಬ ನಿಯಮದ ಬಗ್ಗೆ ಮಾಹಿತಿ ಇಲ್ಲದೆ ಪರದಾಟ ನಡೆಸಿದರು. ಕೋವಿಡ್ ರಿಪೋರ್ಟ್ ಇಲ್ಲದವರನ್ನು ಕಾಲೇಜಿನ ಆಡಳಿತ ಮಂಡಳಿ ವಾಪಸ್ ಕಳಿಸಿದೆ.
ರಾಜಾಜಿನಗರದ ವಿವೇಕಾನಂದ ಕಾಲೇಜಿನಲ್ಲಿ ಪದವಿ ತರಗತಿಗಳು ಆರಂಭವಾಗಿದ್ದು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪಾಠ ಕೇಳಿದರು.
ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಮನೆಯಲ್ಲಿ ಕುಳಿತು ಬೋರ್ ಆಗಿತ್ತು. ಈಗ ಕಾಲೇಜುಗಳು ಶುರುವಾಗಿದ್ದರಿಂದ ಖುಷಿಯಾಗಿದೆ ಎಂದು ವಿದ್ಯಾರ್ಥಿಗಳು ಸಂತಸ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ತರಗತಿಗೆ ಅಟೆಂಡ್ ಆಗಿದ್ದರು. ಕಲಬುರಗಿಯಲ್ಲೂ ಡಿಗ್ರಿ ಕಾಲೇಜುಗಳು ಪುನಾರಂಭವಾಗಿವೆ. ಕಟ್ಟುನಿಟ್ಟಾನ ಕೊರೊನಾ ರೂಲ್ಸ್ ನಡುವೆ ಎನ್.ವಿ ಕಾಲೇಜು ಸೇರಿದಂತೆ ಹಲವು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳು ಕಾಲೇಜು ಆವರಣ ಪ್ರವೇಶ ಮಾಡುತ್ತಿದ್ದಂತೆ ಪ್ರಾಂಶುಪಾಲ ದೇಶಪಾಂಡೆ ಅವರು, ಕೊರೊನಾ ರೂಲ್ಸ್ ಹಾಗೂ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಬಳಿಕವೇ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಬಿಡಲಾಯಿತು.


ಬೆಂಗಳೂರು ಸೇರಿದಂತೆ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳು ಮಾತ್ರ ಇಂದು ಪ್ರಾರಂಭವಾಗಿದ್ದರೆ, ಸದ್ಯಕ್ಕೆ ಕಾಲೇಜುಗಳನ್ನು ಆರಂಭ ಮಾಡುವುದಿಲ್ಲ ಎಂದು ಅನುದಾನ ರಹಿತ ಕಾಲೇಜುಗಳನ್ನು ಓಪನ್ ಮಾಡುವುದಿಲ್ಲ ಎಂದು ಅನುದಾನ ರಹಿತ ಕಾಲೇಜುಗಳ ಸಂಘ ತಿಳಿಸಿದೆ.
ಒಟ್ಟಾರೆ ಗಟ್ಟಿ ನಿರ್ಧಾರ ಮಾಡಿ ಸರ್ಕಾರ ಡಿಗ್ರಿ ಕಾಲೇಜುಗಳನ್ನು ಆರಂಭಿಸಿದ್ದು, ವಿದ್ಯಾರ್ಥಿಗಳು ಕೊರೊನಾ ಹಬ್ಬಿಸುವ ರಾಯಭಾರಿಗಳಾಗ್ತಾರಾ ಅಥವಾ ಇಲ್ಲವೇ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangalorecorona giudlinesdegrcolegesHubliKalburgikarnatakamask compulsoryMysorereopened today
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram