ಮರಾಠ ಅಭಿವೃದ್ಧಿ ಪ್ರಾಧಿಕಾರ, ಮರಾಠಿಗಳ ಅಭಿವೃದ್ಧಿಗಲ್ಲ : ಸೋಮಣ್ಣ
ರಾಯಚೂರು : ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿದ ರಾಜ್ಯ ಸರ್ಕಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಆದ್ರೆ ವಸತಿ ಸಚಿವ ವಿ.ಸೋಮಣ್ಣ, ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮರಾಠ ಅಭಿವೃದ್ದಿ ಪ್ರಾಧಿಕಾರ ಸ್ಥಾಪಿಸಿರೋದು ಮರಾಠಿಗರ ಅಭಿವೃದ್ದಿಗೆ ಅಲ್ಲ.
ಗಡಿನಾಡಲ್ಲಿ ವಾಸಿಸುವ ರಾಜ್ಯದ ಮರಾಠಿಗರಿಗಾಗಿ ಸ್ಥಾಪನೆ ಮಾಡಲಾಗಿದೆ. ಮರಾಠಿಗರು ವಾಸಿಸುವ ಗಡಿನಾಡಿನಲ್ಲಿ ಕನ್ನಡ ಶಾಲೆಗಳ ಅಭಿವೃದ್ದಿಗೆ 50 ಕೋಟಿ ಮೀಸಲಿಡಲಾಗಿದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ
ಗಡಿಭಾಗದಲ್ಲಿರುವ ಮರಾಠಿಗರನ್ನು ಸಹ ಕನ್ನಡಿಗರ ಜತೆಗೆ ಮುಖ್ಯವಾಹಿನಿಗೆ ತರಲು ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಡಿಜೆ ಹಳ್ಳಿ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನದ ಬಗ್ಗೆ ಮಾತನಾಡಿ, ಬೆಂಗಳೂರಿನ ಪ್ರಥಮ ಪ್ರಜೆಯಾಗಿದ್ದ ಸಂಪತ್ ರಾಜ್ ಕಣ್ಮರೆಯಾಗಿದ್ದು ನೋವಿನ ಸಂಗತಿ.
ಕೃಷಿ ತಜ್ಞರೇ ಕೃಷಿ ರೈತರ ಕೃಷಿಗೆ ವೈದ್ಯರಾಗಬೇಕು : ಬಿ.ಸಿ.ಪಾಟೀಲ್
ಕಾನೂನುಗಿಂತ ಯಾರು ದೊಡ್ಡವರಲ್ಲ. ಸಂಪತ್ ರಾಜ್ ಮಾಡಿದ್ದು ತಪ್ಪೋ ಸರಿಯೋ ಎನ್ನುವುದು ತನಿಖೆಯಿಂದ ಗೊತ್ತಾಗುತ್ತಿತ್ತು.
ಆದರೆ, ಅವರು ಕಾನೂನಿಗೆ ಅಗೌರವ ತೋರಿ ಕಣ್ಮರೆಯಾಗಿರುವುದು ನೋವು ತರಿಸಿದೆ. ಅವರ ಬಂಧನ ಬೆಂಗಳೂರು ಪೊಲೀಸರ ದಕ್ಷತೆಗೆ ಹಿಡಿದ ಕೈಗನ್ನಡಿ ಎಂದು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇನ್ನು 2022ರ ಸುಮಾರಿಗೆ ರಾಜ್ಯದಲ್ಲಿ ಪ್ರತಿಯೊಬ್ಬರಿಗು ಸೂರು ಕಲ್ಪಿಸುವುದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪವಾಗಿದೆ.
ವಸತಿ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಈಗಾಗಲೇ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಮಾಡಲಾಗಿದ್ದು, 1.17 ಲಕ್ಷ ಮನೆಗಳ ನಿರ್ಮಾಣ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.