ಡಿಸೆಂಬರ್ 05 ರಂದು ಕರ್ನಾಟಕ ಬಂದ್..?
ಬೆಂಗಳೂರು : ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ರಾಜ್ಯ ಸರ್ಕಾರಕ್ಕೆ ನಾವು ನ.27ರ ವರೆಗೆ ಗಡುವು ನೀಡುತ್ತೇವೆ. ಅಷ್ಟರೊಳಗೆ ಪ್ರಾಧಿಕಾರದಿಂದ ಹಿಂದೆ ಸರಿಯದಿದ್ದರೆ ಡಿ.5ರಂದು ರಾಜ್ಯ ಬಂದ್ ಮಾಡಿ ಕನ್ನಡಿಗರ ಸಾಮಥ್ರ್ಯ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೃಷಿ ತಜ್ಞರೇ ಕೃಷಿ ರೈತರ ಕೃಷಿಗೆ ವೈದ್ಯರಾಗಬೇಕು : ಬಿ.ಸಿ.ಪಾಟೀಲ್
ಇನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ಸರ್ಕಾರ ಕೇವಲ 5 ಕೋಟಿ ಅನುದಾನ ನೀಡಿದೆ. ಆದರೆ, ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಿದೆ. ಸರ್ಕಾರ ಚುನಾವಣೆಗಾಗಿ ಈ ರೀತಿ ಮರಾಠಿಗಳರನ್ನು ಓಲೈಸುವ ಹುನ್ನಾರ ಮಾಡುತ್ತಿದೆ.
ಈಗ ಮರಾಠ ಅಭಿವೃದ್ಧಿ ಪ್ರಾಧಿಕಾರ, ಮುಂದೆ ತಮಿಳು, ತೆಲುಗು, ಮಲಯಾಳಂ ಹೀಗೆ ಅನ್ಯ ರಾಜ್ಯಗಳ ಎಲ್ಲ ನಿವಾಸಿಗಳಿಗೂ ಅಭಿವೃದ್ಧಿ ಪ್ರಾಧಿಕಾರ ಮಾಡಿ ಕನ್ನಡಿಗರನ್ನು ಸರ್ಕಾರ ಅನಾಥರನ್ನಾಗಿ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಗುಡುಗಿದರು.
ಬಳಿಕ ಸಾ.ರಾ.ಗೋವಿಂದು ಮಾತನಾಡಿ, ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದೆ. ಬೆಳಗಾವಿಯಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲ. ಅವರ ಹಿತ ಕಾಯುವುದು ಬಿಟ್ಟು ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ಕೂಡಲೇ ಈ ಕ್ರಮದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ
ಇನ್ನು ಈ ಪ್ರತಿಭಟನೆಯಲ್ಲಿ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವು, ಗಿರೀಶ್ ಕುಮಾರ್, ಶಿವರಾಮೇಗೌಡ, ಪಾಲನೇತ್ರ, ಪ್ರವೀಣ್ ಕುಮಾರ್ ಶೆಟ್ಟಿ ಮುಂತಾದ ಮುಖಂಡರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಸರ್ಕಾರದ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










