ಸಂಪತ್ ರಾಜ್ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ : ಸಿದ್ದರಾಮಯ್ಯ
ಬೆಂಗಳೂರು : ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಪತ್ ರಾಜ್ ಬಂಧನದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಡಿ.ಜೆ ಹಳ್ಳಿ ಪ್ರಕರಣದಲ್ಲಿ ನಾವು ಯಾರನ್ನೂ ಬೆಂಬಲಿಸುವ ಅಥವಾ ಅವರ ಪರ ವಹಿಸಿಕೊಳ್ಳಲು ಹೋಗಲ್ಲ.
ಕೃಷಿ ತಜ್ಞರೇ ಕೃಷಿ ರೈತರ ಕೃಷಿಗೆ ವೈದ್ಯರಾಗಬೇಕು : ಬಿ.ಸಿ.ಪಾಟೀಲ್
ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ. ಚಾರ್ಜ್ ಶೀಟ್ ಹಾಕಿದ ತಕ್ಷಣ ಅಪರಾಧಿ ಆಗಲ್ಲ, ಅವರು ಆರೋಪಿ ಅಷ್ಟೆ.
ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಅದನ್ನ ಪ್ರೂವ್ ಮಾಡುವ ಕೆಲಸವನ್ನು ಪೊಲೀಸರು ಮಾಡಬೇಕು ಎಂದು ಹೇಳಿದರು.
ಇದೇ ವೇಳೆ ಇಂದಿನಿಂದ ಕಾಲೇಜು ಆರಂಭದ ಬಗ್ಗೆ ಮಾತನಾಡಿ, ಶಾಲಾ ಕಾಲೇಜು ಆರಂಭಿಸುವ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದಿದ್ದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ
ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜು ತೆಗೀಬೇಡಿ, ಮಕ್ಕಳಿಗೆ ಡಿಸ್ಟೆನ್ಸ್ ಮೇಂಟೇನ್ ಮಾಡೋದು, ಸ್ಯಾನಿಟೈಸರ್ ಹಾಕಿಕೊಳ್ಳಲು ಆಗೋದಿಲ್ಲ.
ಕಾಲೇಜು ತೆಗಿಲೇಬಾರದು ಅಂತ ಹೇಳಿದ್ದೆ. ಆದ್ರೆ ಈಗ ಕಾಲೇಜು ತೆಗೆದಿದ್ದಾರೆ, ಈಗ ಮಕ್ಕಳಿಗೆ ಮೇಲಿಂದ ಮೇಲೆ ಟೆಸ್ಟ್ ಮಾಡ್ತಾ ಇರಬೇಕು. ಮಕ್ಕಳಿಗೆ ಉಚಿತ ಟೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ಮರಾಠಾ ಪ್ರಾಧಿಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿ, ಪ್ರಾಧಿಕಾರ ರಚನೆಗೆ ನನ್ನ ವಿರೋಧ ಇಲ್ಲ. ಆದರೆ ಬೇರೆ ಸಮುದಾಯಗಳಿಗೂ ಮಾಡಬೇಕಲ್ಲವಾ ಎಂದು ಪ್ರಶ್ನಿಸಿದರು.
ಬಡತನದಲ್ಲಿ ಇರುವ ಸಮುದಾಯಗಳು ಬಹಳಷ್ಟು ಇವೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಬಹಳಷ್ಟು ಸಮುದಾಯಗಳಿಗೂ ಪ್ರಾಧಿಕಾರ ಮಾಡಬೇಕು ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









