ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ : ಸಿಎಂಗೆ ಥ್ಯಾಂಕ್ಸ್ ಹೇಳಿದ ನಿಖಿಲ್
ಮಂಡ್ಯ : ತೀವ್ರ ಕುತೂಹಲ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾದ್ಯಕ್ಷ ಚುನಾವಣೆಗೆ ತೆರೆ ಬಿದ್ದಿದೆ.
ಆಡಳಿತರೂಢ ಬಿಜೆಪಿ ಜೊತೆ ಜೆಡಿಎಸ್ ದೋಸ್ತಿ ಮಾಡಿಕೊಂಡು ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿವೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಬಿಜೆಪಿಯ ಸಿ.ಪಿ.ಅಶೋಕ್ ಆಯ್ಕೆಯಾದ್ರೆ, ಉಪಾಧ್ಯಕ್ಷರಾಗಿ ಜೆಡಿಎಸ್ ನ ಅಶೋಕ್ ಆಯ್ಕೆಯಾಗಿದ್ದಾರೆ.
ಸದ್ಯ ಮಂಡ್ಯದ ರಾಜಕೀಯದಲ್ಲಿ ಸಕ್ರಿಯವಾಗಿ ಇರುವ ನಿಖಿಲ್, ಇಂದು ಮಂಡ್ಯಕ್ಕೆ ಬಂದು ನೂತನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಿಗೆ ಅಭಿನಂದಿಸಿದರು.
ಬಿಎಸ್ವೈ ನಂತ್ರ ಲಿಂಗಾಯತ ಸಮುದಾಯದ ನಾಯಕರ್ಯಾರು : ಪಾಟೀಲ್ ಹೇಳಿದ್ದೇನು?
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಸಿಎಸ್ ಪುಟ್ಟರಾಜು ನೇತೃತ್ವದಲ್ಲಿ ಈ ಗೆಲುವು ಸಿಕ್ಕಿದೆ.
ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಧನ್ಯವಾದ.
ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪ್ರತಾಪ್ ಸಿಂಹ ಮತ್ತು ಸುಮಲತಾ ವಾಕ್ಸಮರದ ಬಗ್ಗೆ ಪ್ರತಿಕ್ರಿಯಿಸಿ, ಸಂಸದರ ನಡುವಿನ ಕೆಸರೆರೆಚಾಟದಲ್ಲಿ ನಾನು ಮಧ್ಯಬರಲ್ಲ ಎಂದು ಹೇಳಿದ್ದಾರೆ.
ಇನ್ನು ನೂತನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಿಗೆ ಅಭಿನಂದಿಸಿದ ನಿಖಿಲ್, ನಂತರ ಜಿಲ್ಲಾ ಕಾಂಗ್ರೆಸ್ ಖಜಾಂಚಿ ಅಮರಾವತಿ ಚಂದ್ರಶೇಖರ್ ಅವರ ನಿವಾಸಕ್ಕೆ ಭೇಟಿ ಕೊಟ್ಟರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








