ಶಿವಮೊಗ್ಗ: ಶಿರಾ ಉಪಚುನಾವಣೆ ಚುನಾವಣೆ ಬಳಿಕ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸಲಾಗುತ್ತಿದೆ. ಶಿರಾ ಕ್ಷೇತ್ರದ ಗೆಲುವು ವಿಜಯೇಂದ್ರ ಅವರ ಗೆಲುವಲ್ಲ. ಅದು ನಮ್ಮ ಸಂಘಟನೆಯ ಗೆಲುವು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಶಿರಾ ಹಾಗೂ ಆರ್.ಆರ್ ನಗರ ಕ್ಷೇತ್ರದಲ್ಲಿನ ಗೆಲುವು ಯಾವುದೇ ಒಬ್ಬ ವ್ಯಕ್ತಿಯಿಂದ ಆಗಿದ್ದಲ್ಲ. ಆ ಗೆಲುವುಗಳು ನಮ್ಮ ಪಕ್ಷದ ಸಂಘಟನೆಯ ಗೆಲುವು ಎಂದು ಹೇಳಿದ್ದಾರೆ.
ಡಿ.ಜೆ.ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರದ ಆಸೆಗೆ ಕಾಂಗ್ರೆಸ್ಸಿಗರು ಯಾರನ್ನಾದರೂ ಸುಡುತ್ತಾರೆ. ಸುಟ್ಟವರನ್ನು ರಕ್ಷಣೆಯನ್ನೂ ಮಾಡುತ್ತಾರೆ. ತನ್ನ ಮನೆ ಸುಡಲು ಕಾಂಗ್ರೆಸ್ಸಿಗರೇ ಕಾರಣ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದರು. ದೇಶದ್ರೋಹಿ ಸಂಘಟನೆಗಳು ತುಂಬಾ ದಿನದಿಂದ ಪ್ಲಾನ್ ಮಾಡಿ ಈ ಕೆಲಸ ಮಾಡಿದ್ದರು. ಅವರೆಲ್ಲರ ಬಂಧನ ಈಗಾಗಲೇ ಆಗಿದೆ ಎಂದರು.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಅಖಂಡ ಶ್ರೀನಿವಾಸ ಮೂರ್ತಿ ಬೆನ್ನಿಗೆ ನಿಂತಿಲ್ಲ. ತಾವು ಅಧಿಕಾರಕ್ಕೆ ಬರಲು ಯಾರು ತಮ್ಮ ಬೆನ್ನ ಹಿಂದೆ ನಿಲ್ಲುತ್ತಾರೆಯೋ ಅವರ ಬೆನ್ನ ಹಿಂದೆ ಸಿದ್ದರಾಮಯ್ಯ, ಡಿಕೆಶಿ ನಿಲ್ಲುತ್ತಾರೆ. ದೇಶದ್ರೋಹಿಗಳನ್ನು ರಕ್ಷಣೆ ಮಾಡುವುದೇ ಕಾಂಗ್ರೆಸ್ ಅಜೆಂಡಾ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸ್ ವಿಸರ್ಜನೆಯಾಗಿರಲಿಲ್ಲ. ಇದೀಗ ಕಾಂಗ್ರೆಸ್ ನಾಯಕರೇ ಕಾಂಗ್ರೆಸನ್ನು ವಿಸರ್ಜನೆ ಮಾಡಲಾರಂಭಿಸಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel