ಬಂದ್ ಬೇಡ, ಮರಾಠಿಗರೂ ನಮ್ಮ ಕನ್ನಡಿಗರೇ : ಬಿಎಸ್ ವೈ
ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ.
ಕನ್ನಡ ಪರ ಸಂಘಟನೆಗಳು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಡುತ್ತಿವೆ. ಈ ಮಧ್ಯೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಬಂದ್ ಕರೆ ನೀಡಿವೆ.
ಡಿಸೆಂಬರ್ 05 ರಂದು ಕರ್ನಾಟಕ ಬಂದ್..?
ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ಬಲವಂತದ ಬಂದ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಬಂದ್ ನಡೆಸುವ ಅಗತ್ಯವಿಲ್ಲ.
ಮರಾಠಿಗರು ಕೂಡ ನಮ್ಮ ರಾಜ್ಯದ ಕನ್ನಡಿಗರೇ. ಈ ಮರಾಠಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ಮರಾಠ ಅಭಿವೃದ್ಧಿ ನಿಗಮ ರಚನೆದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಅಲ್ಲದೇ, ಡಿಸೆಂಬರ್ 5ರ ಕರ್ನಾಟಕ ಬಂದ್ ಗೆ ಆಕ್ಷೇಪ ವ್ಯಕ್ತ ಪಡಿಸಿರುವ ಸಿಎಂ, ರಾಜ್ಯದಲ್ಲಿರುವ ಮರಾಠಿಗರೂ ಸಹ ನಮ್ಮ ಕನ್ನಡಿಗರಿದ್ದಾರೆ.
ಇಂದಿನಿಂದ ಕಲಬುರಗಿ-ಟು-ದೆಹಲಿ ವಿಮಾನ ಹಾರಾಟ ಶುರು..!
ಈ ಮರಾಠಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲಾಗಿದೆ. ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿ ನಿನ್ನೆ ಬೆಂಗಳೂರು ನಗರ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ರಾಜ್ಯ ಸರ್ಕಾರಕ್ಕೆ ನಾವು ನ.27ರ ವರೆಗೆ ಗಡುವು ನೀಡುತ್ತೇವೆ. ಅಷ್ಟರೊಳಗೆ ಪ್ರಾಧಿಕಾರದಿಂದ ಹಿಂದೆ ಸರಿಯದಿದ್ದರೆ ಡಿ.5ರಂದು ರಾಜ್ಯ ಬಂದ್ ಮಾಡಿ ಕನ್ನಡಿಗರ ಸಾಮಥ್ರ್ಯ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









