ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಡಿಮ್ಯಾಂಡ್ ಇಟ್ಟುಕೊಂಡು ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, 2ನೇ ಬಾರಿಯೂ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಗದೇ ಬರಿಗೈಲಿ ವಾಪಸ್ಸಾಗಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ಹೋಗಿದ್ದ ಸಿಎಂ ಬಿಎಸ್‍ವೈ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿವಾಸದಲ್ಲಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದರು.

ಚರ್ಚೆಯ ವೇಳೆ ಸಿಎಂ ಬಿಎಸ್‍ವೈ ಅವರು ನಡ್ಡಾ ಅವರಿಗೆ ಸಂಪುಟ ವಿಸ್ತರಣೆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಕೊಟ್ಟು ಬಂದಿದ್ದಾರೆ. ಹೈಕಮಾಂಡ್ ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಿಲ್ಲ. ಅದರೆ ಯಡಿಯೂರಪ್ಪ ಅವರಿಗೆ ಅಮಿತ್ ಷಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಇದರಿಂದ ಜೆ.ಪಿ ನಡ್ಡಾ ಮೂರು ದಿನಗಳ ನಂತರದಲ್ಲಿ ಈ ಬಗ್ಗೆ ತಿಳಿಸಲಾಗುತ್ತದೆ ಎಂದು ಯಡಿಯೂರಪ್ಪ ಅವರಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದಾರೆ. ಈ ಫರ್ಮಾನನ್ನು ಹೊತ್ತು ಹೋದ ದಾರಿಗೆ ಸುಂಕವಿಲ್ಲ ಎಂದು ಸಿಎಂ ಯಡಿಯೂರಪ್ಪ ಹೋದಷ್ಟು ಸ್ಪೀಡಾಗಿ ಬೆಂಗಳೂರಿಗೆ ವಾಪಾಸಾಗಿದ್ದಾರೆ ಎನ್ನಲಾಗಿದೆ.

ಜೆ.ಪಿ ನಡ್ಡಾ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‍ವೈ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈಗ ನೇರವಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.
ಎರಡು ಕ್ಷೇತ್ರಗಳ ಉಪಚುನಾವಣೆ ಮುಗಿದ ಬಳಿಕ ಸಿಎಂ ಬಿಎಸ್‍ವೈ ಅವರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಅನುಮತಿ ಪಡೆಯಲು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಿಎಸ್‍ವೈ ಅವರ ಅಭಿಪ್ರಾಯ ಹಾಗೂ ಪಟ್ಟಿಯನ್ನು ಪಡೆದು, ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಾಳೆ ಅಥವಾ ನಾಳಿದ್ದು, ಹೈಕಮಾಂಡ್‍ನಿಂದ ನಿರ್ದೇಶನ ಬಂದ ಬಳಿಕ ಸಿಎಂ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಮೂಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







