Nalin kumar kateel
ಸಂಪುಟ ವಿಸ್ತರಣೆ ಯಾವಾಗ..? ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು..!
ಬೆಂಗಳೂರು: ಸಿಎಂ ಬಿಎಸ್ ಯಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದ್ರೆ ಈ ಕುರಿತು ನಾನಾ ರೀತಿಯ ಚರ್ಚೆಗಳು ಆರಂಭವಾಗಿದೆ. ಈ ಬಗ್ಗೆ ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ ಎಂದು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದಾರೆ: ಬಿ.ಸಿ.ಪಾಟೀಲ್
ಬಿಜೆಪಿ ಕಚೇರಿಯಲ್ಲಿ ಈ ಕುರಿತಾಗಿ ಮಾತನಾಡಿರುವ ಅವರು ಪಕ್ಷದ ಬಿ ಫಾರಂ ಪಡೆದು ಗೆದ್ದ ನಂತರ ಮೂಲ ವಲಸಿಗ ಎನ್ನುವ ಮಾತು ಬಿಜೆಪಿಯಲ್ಲಿ ಇಲ್ಲ. ಎಲ್ಲರೂ ಬಿಜೆಪಿಯ ನಾಯಕರು. ಆದರೆ ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ, ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮಯವಕಾಶ ಕೊಟ್ಟಿದ್ದರು. ಅದರಂತೆ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದಿದ್ದಾರೆ.
ದಿಲ್ಲಿಯಿಂದ ಬರಿಗೈಲಿ ಬಿಎಸ್‍ವೈ; `ರಾಜಾಹುಲಿ’ ಬದಲಾವಣೆ ಮುನ್ಸೂಚನೆ ಎಂದ ಕೆ.ಎನ್ ರಾಜಣ್ಣ..!
ಮುಂದುವರೆದು ಮಾತನಾಡಿರುವ ಅವರು ನಡ್ಡಾ ಅವರು ಮುಖ್ಯ ಮಂತ್ರಿಗಳ ಜೊತೆ ಏನು ಮಾತನಾಡಬೇಕಿತ್ತೋ ಅದನ್ನು ಮಾತನಾಡಿದ್ದಾರೆ. ಅದೇ ರೀತಿ ಮುಖ್ಯಮಂತ್ರಿಗಳು ಕೊಡ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಏನೆಲ್ಲಾ ತರಬೇಕು ತಂದಿದ್ದಾರೆ. ಇಲ್ಲಿ ಕಡಿಮೆ ಸಮಯ ನೀಡಿದ್ದರು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಲ್ಲ ಎಂದಿದ್ದಾರೆ. ಆದರೂ ಸ್ಪಷ್ಟವಾಗಿ ಏನನ್ನೂ ಹೇಳದೆ ಗೊಂದಲಕರ ಹೇಳಿಕೆ ನೀಡಿದ್ದಾರೆ ಕಟೀಲ್.
ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ; ಹುಬ್ಬಳ್ಳಿಯಲ್ಲಿ ಕರವೇ ಪ್ರತಿಭಟನೆ
Nalin kumar kateel
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel