ಕೊಪ್ಪಳ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಮಿನಿ ಬಸ್‍ನಲ್ಲಿ ಹೊರಟವರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಎದುರಿನಿಂದ ಬರುತ್ತಿದ್ದ ಬೈಕ್‍ಗೆ ನಿಶ್ಚಿತಾರ್ಥ ಕಾರ್ಯಕ್ಕೆಂದು ಹೊರಟ್ಟಿದ್ದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಅಫಘಾತದ ರಭಸಕ್ಕೆ ಬೈಕ್ ಸವಾರ ಹಾಗೂ ಮಿನಿ ಬಸ್‍ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.
ಕುಕನೂರು ತಾಲೂಕಿನ ಬೆಣಕಲ್ ಕ್ರಾಮದ ಬೈಕ್ ಸವಾರ ಸಂತೋಷ್(25), ಮಿನಿ ಬಸ್‍ನಲ್ಲಿದ್ದ ರಂಗಪ್ಪ(80), ಭೀಮವ್ವ(70) ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್‍ನಲ್ಲಿದ್ದ ಇನ್ನೂ ಇಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮದಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಸಂಬಂಧಿಕರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪದಿಂದ ಮಿನಿ ಬಸ್‍ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ನಿಟ್ಟಾಲಿ ಕಡೆಯಿಂದ ಬರುತ್ತಿದ್ದ ಬೈಕ್‍ಗೆ ಮೊದಲು ಡಿಕ್ಕಿ ಹೊಡೆದ ಮಿನಿ ಬಸ್, ನಂತರ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಸ್ಥಳಕ್ಕೆ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel