DCM lakshman savadi
ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದ ಡಿಸಿಎಂ ಲಕ್ಷ್ಮಣ್ ಸವದಿ..!
ಕಲಬುರಗಿ: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಅಸ್ತು ಎಂದ ಬೆನ್ನಲ್ಲೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕನ್ನಡ ಸಂಘಟನೆಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕುತ್ತಿವೆ. ಇತ್ತ ರಾಜ್ಯ ಸರ್ಕಾರದ ನಡೆ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡಿ ಪ್ರತಿಭಟಿಸಲು ಸಜ್ಜಾಗಿವೆ.
ಆದ್ರೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ನಡೆಯನ್ನ ಸಮರ್ಥಿಸಿಕೊಂಡು ಮಾತನಾಡುತ್ತಿದ್ದಾರೆ. ಅಂತೆಯೇ ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಸಮುದಾಯವನ್ನು ಪ್ರೀತಿಸಿದಂತೆ ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದು ಸೂರ್ಯಚಂದ್ರ ಇರುವವರೆಗೂ ಬೆಳಗಾವಿ ನಮ್ಮದು. ಸರ್ಕಾರ ಮರಾಠಾ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿರುವುದು ಭಾಷೆ ಮಧ್ಯದ ಗೊಂದಲ ಅಲ್ಲ.ಒಂದು ಸಮುದಾಯಕ್ಕೆ ಆರ್ಥಿಕ ಬಲ ತುಂಬುವ ಉದ್ದೇಶದಿಂದ ನಿಗಮ ಮಾಡಲಾಗಿದೆ ಎಂದರು.
ಅಲ್ಲದೇ ಮರಾಠ ಸಮುದಾಯದವರು ನಮ್ಮ ನೆಲದಲ್ಲಿ ಸಾವಿರಾರು ವರ್ಷಗಳಿಂದ ನೆಲೆಸಿದ್ದಾರೆ. ಆ ಸಮುದಾಯದ ಬಡವರಿಗೆ ಅನುಕೂಲ ಆಗಲು ಈ ತೀರ್ಮಾನ ಕೈಗೊಳ್ಳಲಾಗಿದೆ.ಕನ್ನಡ ಪ್ರಾಧಿಕಾರ, ಮರಾಠಿ ಪ್ರಾಧಿಕಾರ ರೀತಿ ಅಲ್ಲ. ಎಲ್ಲಾ ಸಮುದಾಯವನ್ನು ಪ್ರೀತಿಸಿದಂತೆ ಮರಾಠ ಸಮುದಾಯವನ್ನು ಪ್ರೀತಿಸೋಣ ಎಂದು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವರ್ ಉದ್ಧಟತನದ ಮಾತನಾಡಿದ್ದಾರೆ. ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದು ಸೂರ್ಯಚಂದ್ರ ಇರುವವರೆಗೂ ಬೆಳಗಾವಿ ನಮ್ಮದು.ಈ ವಿಚಾರದಲ್ಲಿ ಅವರು ಉದ್ಧತಟನದ ಮಾತು ನಿಲ್ಲಿಸಬೇಕು. ಅವರು ಇತಿಹಾಸವನ್ನೊಮ್ಮೆ ತೆಗೆದು ನೋಡಬೇಕು. ಅವರ ಮಾತಿನಿಂದಲೇ ಹಿಂದೆ ಅವರ ಸರ್ಕಾರದಲ್ಲಿ ಏನಾಗಿದೆ ಎನ್ನುವುದರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದಿದ್ದಾರೆ.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು ಈ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮನವರಿಕೆ ಮಾಡಿ ಬಂದಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೊತೆ ಅವರೊಂದಿಗೆ ಸಮಾಲೋಚಿಸಿ ತೀರ್ಮಾನ ಕಳುಹಿಸಿಕೊಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ. ನಾಲ್ಕೈದು ದಿನಗಳಲ್ಲಿ ಅಂತಿಮ ತೀರ್ಮಾನ ಹೊರಬೀಳಲಿದೆ ಎಂದಿದ್ದಾರೆ.
DCM lakshman savadi
ನಿಶ್ಚಿತಾರ್ಥಕ್ಕೆ ಹೊರಟವರು ಮಸಣ ಸೇರಿದರು: ಭೀಕರ ಅಪಘಾತದಲ್ಲಿ ನಾಲ್ವರು ಬಲಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel