umashree
ನಟಿ ಹಾಗೂ ರಾಜಕಾರಣಿ ಉಮಾಶ್ರೀ ಕಾರು ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು
ಹಿರಿಯ ನಟಿ ಹಾಗೂ ರಾಜಕಾರಣಿಯಾಗಿರುವ ಉಮಾಶ್ರೀ ಅವರ ಒಡೆತನದ ಕಾರು ತಡರಾತ್ರಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಲೆನೋ ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಲೆನೋ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಎ್ನಲಾಗಿದೆ.
ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಅಖಂಡ ಶ್ರೀನಿವಾಸಮೂರ್ತಿ: ಡಿಕೆಶಿ ಬಳಿ ಅಖಂಡ ಹೇಳಿದ್ದೇನು..?
ಗದಗದಿಂದ ಹುಬ್ಬಳ್ಳಿಗೆ ಬರುತ್ತಿದ್ದ ನಟಿ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಕಾರು ಹಾಗೂ ಹುಬ್ಬಳ್ಳಿಯಿಂದ ಗದಗದತ್ತ ಹೊರಟಿದ್ದ ಮತ್ತೊಂದು ಕಾರಿನ ನಡುವೆ ಡಿಕ್ಕಿಯಾಗಿದೆ. ಇನ್ನೂ ಅಪಘಾತದ ವೇಳೆ ಕಾರಿನಲ್ಲಿ ಉಮಾಶ್ರೀ ಅವರು ಇರಲಿಲ್ಲ. ಇನ್ನೂ ಕಾರು ಚಾಲಕರು ಉಮಾಶ್ರೀ ಅವರನ್ನು ಬಿಟ್ಟು ತಮ್ಮ ಊರಿಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಮಾಶ್ರೀ ಅವರು, “ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣಗಳು ಹೋದವಲ್ಲಾ, ಅದರಿಂದ ತುಂಬಾ ನೋವಾಗುತ್ತಿದೆ. ಇಂತಹ ಕಾರುಗಳು ಬರಬಹುದು, ಹೋಗಬಹುದು ಆದರೆ ಜೀವ ಹಾಗಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
umashree
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








