ಡಿ.7 ರಂದು ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ
ದಾವಣಗೆರೆ : ಭೂ ಸುಧಾರಣೆ ತಿದ್ದುಪಡಿ, ಎಂಪಿಎಂಸಿ ಕಾಯ್ದೆ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಡಿಸೆಂಬರ್ 7 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘ ನಿರ್ಧರಿಸಿದೆ.
ಇಂದು ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆ ನಡೆಯಿತು.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮುಂದಿನ ತಿಂಗಳು 7 ನೇ ತಾರೀಕು ವಿಧಾನಸೌಧ ಮುತ್ತಿಗೆ ಹಾಕಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬದುಕು ಕಸಿದುಕೊಳ್ಳುತ್ತಿವೆ ಎಂದು ಆಕ್ರೋಶ ಹೊರಹಾಕಿದರು.
ಇನ್ನು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಈಗಾಗಲೇ ಹೋರಾಟ ನಡೆಸಿದ್ದೇವೆ.
ಯತ್ನಾಳ್ ಗೆ ಧೈರ್ಯವಿದ್ರೆ ಪರಿಹಾರ ನೀಡದ ಮೋದಿಯನ್ನು ಪ್ರಶ್ನಿಸಲಿ’ :ಟಿ.ಎ.ನಾರಾಯಣಗೌಡ
ಇನ್ನು ಪ್ರಬಲವಾಗಿ ಒಟ್ಟಾಗಿ ಹೋರಾಡುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟ ಚಂದ್ರಶೇಖರ್, ಪ್ರತಿಯೊಬ್ಬ ರೈತರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾದ ಅಗತ್ಯತೆ ಇದೆ.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರೈತ ಉತ್ಪನ್ನಗಳ ಖರೀದಿ ಕೇಂದ್ರ ಆರಂಭಿಸಬೇಕು. ಮೆಕ್ಕೆಜೋಳ, ಭತ್ತ ಸೇರಿದಂತೆ ಬೆಳೆಗಳ ಖರೀದಿ ಕೇಂದ್ರ ಪ್ರಾರಂಭಿಸುವವರೆಗೂ ಹೋರಾಡೋಣ ಎಂದು ರೈತರಿಗೆ ಕರೆಕೊಟ್ಟರು.
ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಸಾ.ರಾ.ಗೋವಿಂದು
ಇದೇ ವೇಳೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳು ಭವಿಷ್ಯದಲ್ಲಿ ಮಾರಕವಾಗಲಿವೆ.
ಕೇಂದ್ರ ಸರ್ಕಾರದ ಎಪಿಎಂಸಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ವಿರೋಧಿಸಿ ನವದೆಹಲಿಯಲ್ಲಿ ನವೆಂಬರ್ 26 ಹಾಗೂ 27 ರಂದು ದೇಶದ 250 ಸಂಘಟನೆಗಳೊಂದಿಗೆ ಸೇರಿ ಪ್ರತಿಭಟನೆ ನಡೆಸಲಾಗುವುದು.
26ರಂದು ರಾಮಲೀಲಾ ಮೈದಾನದಲ್ಲಿ ಧರಣಿ ಹಾಗೂ ಸಂಸತ್ ಎದುರು 27ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಕೇಂದ್ರದ ನೀತಿಗಳು ರೈತರಿಗೆ ಮರಣಶಾಸನವಾಗಿವೆ. ಕೇಂದ್ರ ಕಾರ್ಪೊರೇಟ್, ಎಂಎನ್ ಸಿ ಕಂಪನಿಗಳ ಪರವಾಗಿ ನಿರ್ಧಾರ ತೆಗೆದುಕೊಂಡಿದ್ದೇ ಕೆಲ ದಿನಗಳ ಹಿಂದೆ ಈರುಳ್ಳಿ, ತೊಗರಿ ಬೆಳೆ ದರ ಹೆಚ್ಚಾಗಲು ಕಾರಣ ಎಂದು ಚಂದ್ರಶೇಖರ್ ಅವರು ಆರೋಪಿಸಿದರು.
ಇನ್ನು ಮಾರುಕಟ್ಟೆ ಕಾರ್ಪೊರೇಟ್ ಕಂಪನಿಗಳ ಹಿಡಿತಕ್ಕೆ ಹೋದರೆ ರೈತರ ಬದುಕು ಮೂರಾಬಟ್ಟೆ ಆಗಲಿದೆ. ಯಾವುದೇ ಕಾರಣಕ್ಕೆ ರೈತರು ತುಂಡು ಭೂಮಿಯನ್ನು ನೀಡಬಾರದು. ಎಷ್ಟೇ ಕಷ್ಟ ಬಂದರೂ ಜಮೀನು ಮಾರಾಟ ಮಾಡಬೇಡಿ ಎಂದು ರೈತರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










