ಕೊರೊನಾ | ದೇಶದಲ್ಲಿಂದು 45,209 ಮಂದಿಗೆ ಸೋಂಕು, 43,493 ಮಂದಿ ಗುಣಮುಖ
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಕಾಟ ಮುಂದುವರಿದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 90,95,807ಕ್ಕೆ ಬಂದು ನಿಂತಿದೆ.
ನಾಗ್ರೋಟಾ ಎನ್ ಕೌಂಟರ್ – ಪಾಕಿಸ್ತಾನದ ಉನ್ನತ ರಾಯಭಾರಿಗೆ ಸಮನ್ಸ್ ನೀಡಿದ ಭಾರತ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ ಕಳೆದ 24 ಗಂಟೇಲ್ಲಿ ದೇಶದಲ್ಲಿ 45,209 ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 501 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 90,95,807ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ ಕೂಡ 1,33,227ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದಿನದಲ್ಲಿ ಗರಿಷ್ಠ 12 ಗಂಟೆಗಳ ಕೆಲಸದ ಸಮಯ – ಕಾರ್ಮಿಕ ಸಚಿವಾಲಯ ಪ್ರಸ್ತಾಪ
ಇನ್ನು ಒಟ್ಟಾರೆ 90,95,807 ಕೊರೊನಾ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 43,493 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 85,21,617ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ 4,40,962 ಸಕ್ರಿಯ ಪ್ರಕರಣಗಳಿವೆ.
ಇತ್ತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,75,326 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ದೇಶದಲ್ಲಿ ಈ ವರೆಗೂ 13,17,33,134 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










