ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಪಿಸಿಸಿ ಕಚೇರಿಗೆ ಬನ್ನಿ, ಸಂವಿಧಾನ ಪಾಠ ಕಲಿಸ್ತೇವೆ: ಸಿ.ಟಿ ರವಿಗೆ ಕಾಂಗ್ರೆಸ್ ಪಂಥಾಹ್ವಾನ..!

Kariyappa N by Kariyappa N
November 22, 2020
in Newsbeat, Politics, Samagra karnataka, ರಾಜ್ಯ
tweet war
Share on FacebookShare on TwitterShare on WhatsappShare on Telegram

ಬೆಂಗಳೂರು: ಗೋಹತ್ಯೆ ಹಾಗೂ ಲವ್ ಜಿಹಾದ್ ಕಾನೂನು ವಿಚಾರವಾಗಿ ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಿದ್ದಾಂತದ ಜಟಾಪಟಿ ಮುಂದುವರೆದಿದೆ.
ದೇಶ ಪ್ರೇಮದ ಚಿಂತನೆಗಳ ಬಗ್ಗೆ ನಿಮಗೆ ತಿಳಿಸಿ ಕೊಡುತ್ತೇವೆ, ಆರ್‍ಎಸ್‍ಎಸ್ ಕಚೇರಿಗೆ ಬನ್ನಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.
ಸಿ.ಟಿ ರವಿ ಆಹ್ವಾನಕ್ಕೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್, ಕೆಪಿಸಿ ಕಚೇರಿಗೆ ಬರುವಂತೆ ಪಂಥಾಹ್ವಾನ ನೀಡಿದೆ.  `ಸಿ.ಟಿ ರವಿಯವರೇ ನಿಮ್ಮನ್ನು ಕಾಂಗ್ರೆಸ್ ಕಛೇರಿಗೆ ಆಹ್ವಾನಿಸುತ್ತೇವೆ. ದೇಶದ ಇತಿಹಾಸ, ದೇಶಕ್ಕೆ ಕಾಂಗ್ರೆಸ್ ಕೊಡುಗೆ, ಜಾತ್ಯತೀತ ಸಿದ್ದಾಂತ, ಬಹುತ್ವ ಭಾರತದ ಅಂತಃಶಕ್ತಿ, ಸೌಹಾರ್ದತೆಯ ಅಗತ್ಯ, ಸಂವಿಧಾನದ ಆಶಯಗಳ ಬಗ್ಗೆ ನೀವು ತಿಳಿದುಕೊಳ್ಳುವ ಅಗತ್ಯವಿದೆ. ನಮ್ಮಲ್ಲಿ ನಿಮಗೆ ಅರಿವು ನೀಡುತ್ತೇವೆ, ಆರ್‍ಎಸ್‍ಎಸ್ ಚಿಂತನೆಗಳನ್ನ ಬಿಟ್ಟು ಕೆಪಿಸಿಸಿ ಕಚೇರಿಗೆ ಬನ್ನಿ ಎಂದು ಟ್ವಿಟರ್‍ನಲ್ಲಿ ರಾಜ್ಯ ಕಾಂಗ್ರೆಸ್ ಸವಾಲು ಹಾಕಿದೆ.


ಗಾಂಧಿ ಹತ್ಯೆಯಲ್ಲಿ ಕೈವಾಡವಿರುವ ವಿಚಾರದಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರಿಂದ ನಿಷೇಧಕ್ಕೊಳಪಟ್ಟಿದ್ದ, ತ್ರಿವರ್ಣ ಧ್ವಜವನ್ನ ಒಪ್ಪದಿದ್ದ, ಸಂವಿಧಾನವನ್ನು, ಅದರ ಆಶಯಗಳನ್ನು ಗೌರವಿಸದ ಸಂಘಟನೆಯಿಂದ ಕಲಿಯುವುದು ಏನೂ ಇಲ್ಲ, ನೀವು ಆರ್‍ಎಸ್‍ಎಸ್‍ನ ಕೋಮುವಾದಿ ಮನಸ್ಥಿತಿಯನ್ನು ಬಿಟ್ಟು ಬನ್ನಿ, ಸಂವಿಧಾನದ ಪಾಠವನ್ನು ನಾವು ಕಲಿಸುತ್ತೇವೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ಸಿ.ಟಿ ರವಿಗೆ ಅವರಿಗೆ ತಿರುಗೆಟು ನೀಡಿದೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ನಿಮ್ಮ ಕಚೇರಿ ಬಾಗಿಲು ತುಳಿಯುವ ದೌರ್ಭಾಗ್ಯ ಬಂದಿಲ್ಲ-ಸಿ.ಟಿ ರವಿ
ಕಾಂಗ್ರೆಸ್ ಕಚೇರಿಗೆ ಬರುವಂತೆ ಆಹ್ವಾನ ನೀಡಿರುವ ಕಾಂಗ್ರೆಸ್‍ಗೆ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಒಂದು ಕುಟುಂಬಕ್ಕೋಸ್ಕರ ದೇಶವನ್ನು ಬಲಿ ನೀಡಿದ್ದೇ ನಿಮ್ಮ ಸಾಧನೆಯಲ್ಲವೇ? ಗಾಂಧಿಯವರ ತತ್ವಸಿದ್ಧಾಂತ ಕೊಂದ ನೀವು ಇನ್ನೊಬ್ಬರಿಗೆ ಬೋಧನೆ ಮಾಡುತ್ತಿದ್ದೀರಾ? ಸಂವಿಧಾನವನ್ನು ಧಿಕ್ಕರಿಸಿದ ನಿಮ್ಮಿಂದ ಅದರ ಆಶಯಗಳನ್ನು ತಿಳಿದುಕೊಳ್ಳಬೇಕೆ ನಾನು?
ಕೋಮುವಾದದ ಹೊಂಡದಲ್ಲಿ ಮುಳುಗಿರುವ ನಿಮಗೆ ಆರ್.ಎಸ್.ಎಸ್ ಕುರಿತು ಮಾತನಾಡುವ ಅರ್ಹತೆ ಇದೆಯೇ?


ಅಯ್ಯೋ ಕಾಂಗ್ರೆಸ್ ಪಕ್ಷವೇ, ದೇಶದಾದ್ಯಂತ ಮುಳುಗುತ್ತಿರುವ ನಿಮ್ಮ ಪಕ್ಷದ ಇತಿಹಾಸವೇ 1969 ರಿಂದ ಪ್ರಾರಂಭವಾಗಿರುವಾಗ, ದೇಶದ ಇತಿಹಾಸದ ಬಗ್ಗೆ ನೀವೇನು ಹೇಳಿ ಕೊಡುತ್ತೀರಾ ನನಗೆ? ಒಂದು ಕೋಮಿನ ಓಲೈಕೆ ಮಾಡುವುದೇ ಜಾತ್ಯತೀತ ಸಿದ್ಧಾಂತವೇ?
ದೇಶದಾದ್ಯಂತ ಮುಳುಗುತ್ತಿರುವ ನಿಮ್ಮ ಪಕ್ಷದ ಕಚೇರಿಯ ಬಾಗಿಲು ತುಳಿಯುವ ದೌರ್ಭಾಗ್ಯ ನನಗೆ ಬಂದಿಲ್ಲ ಮತ್ತು ಬರುವುದೂ ಇಲ್ಲ ಎಂದು ಕಾಂಗ್ರೆಸ್‍ಗೆ ಸಿ.ಟಿ ರವಿ ಟಾಂಗ್ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPC T RaviCongresskpccplurality of India.RSSteach the constitutiontweet war
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram