ಬಂದ್ ಗೆ ಕರೆ : `ಕನ್ನಡ ಸಂಘಟನೆಗಳಿಗೆ ಅನುದಾನ ಕಡಿತ’
ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ರಾಜ್ಯ ಬಿಜೆಪಿ ಸರ್ಕಾರ ಕನ್ನಡಪರ ಸಂಘಟನೆಗಳಿಗೆ ರಾಜ್ಯೋತ್ಸವ ಆಚರಣೆಗೆ ನೀಡುತ್ತಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
ಅಲ್ಲದೆ ಅನುದಾನ ತಡೆಹಿಡಿಯುವ ಮೂಲಕ ಸರ್ಕಾರ ಕರ್ನಾಟಕ ಬಂದ್ ವಿಫಲಗೊಳಿಸುವ ಷಡ್ಯಂತ್ರವನ್ನು ಮಾಡುತ್ತಿದೆ ಎಂದು ಅವರು ದೂರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡುವ ಮರಾಠಿಗಳಿಗೆ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ 50 ಕೋಟಿ ಅನುದಾನ ನೀಡಿದೆ.
ಆದ್ರೆ ಪ್ರತಿನಿದ ಕನ್ನಡ ಉಳಿವಿಗಾಗಿ ಹೋರಾಡಿ, ನಾಡು ನುಡಿ, ಸಂಸ್ಕøತಿ, ನೆಲ ಜಲಕ್ಕಾಗಿ ಬಡಿದಾಡುವ ಕನ್ನಡ ಸಂಘಟನೆಗಳಿಗೆ ಅನುದಾನ ಕಡಿತ ಮಾಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಬಳ್ಳಾರಿ ವಿಭಜನೆ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ
ಕನ್ನಡಪರ ಸಂಘಟನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತ ಮಾಡುವ ಮೂಲಕ ರಾಜ್ಯ ಸರ್ಕಾರ ಬ್ಲಾಕ್ ಮೇಲ್ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿರುವ ವಾಟಾಳ್ ನಾಗರಾಜ್, ಇದಕ್ಕೆ ನಾವು ಸೊಪ್ಪು ಹಾಕುವುದಿಲ್ಲ ಕನ್ನಡಪರ ಹೋರಾಟವನ್ನು ನಿತ್ಯ ನಿರಂತರವಾಗಿ ಮಾಡುತ್ತೇವೆ. ಮುಂದೆಯೂ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾನು 1962ರಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತ ಬಂದಿದ್ದೇನೆ. ಸರ್ಕಾರದಿಂದ ಅನುದಾನ ಪಡೆದಿದ್ದೇನೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ 5 ವರ್ಷಗಳಿಂದಲೂ ರಾಜ್ಯೋತ್ಸವ ಆಚರಣೆಗೆ ಅನುದಾನ ನೀಡಲಾಗಿದೆ.
ಆದರೆ ಯಡಿಯೂರಪ್ಪ ಸರ್ಕಾರದಲ್ಲಿ ರಾಜ್ಯೋತ್ಸವ ಆಚರಣೆಗೆ ಅನುದಾನ ನೀಡಿಲ್ಲ ಎಂದು ವಾಟಾಳ್ ಆರೋಪಿಸಿದರು.
ಅಲ್ಲದೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಕ್ಕೆ ಅನುದಾನ ಕಡಿತ ಮಾಡುವ ಮೂಲಕ ನಮ್ಮ ಹೋರಾಟ ವಿಫಲಗೊಳಿಸುವ ಷಡ್ಯಂತ್ರವನ್ನು ಸರ್ಕಾರ ಮಾಡಲು ಮುಂದಾಗಿದೆ.ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










