ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇಂದು ಬೆಳಿಗ್ಗೆಯೇ ರೋಷನ್‍ಬೇಗ್ ಅವರನ್ನು ಮನೆಯಿಂದ ಕರೆತಂದ ಸಿಬಿಐ ಅಧಿಕಾರಿಗಳು, ಗಂಗಾನಗರದ ಸಿಬಿಐ ಕಚೇರಿಯಲ್ಲಿ ಸುದೀರ್ಘ ವಿಚಾರಣೆ ನಡೆಸುತ್ತಿದ್ದಾರೆ.

ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಶಾಮೀಲಾಗಿರುವ ಬಗ್ಗೆ ಆರೋಪ ಬಂದಿತ್ತು. ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎನ್ನಲಾಗಿದೆ. ಐಷಾರಾಮಿ ಕಾರು ಸೇರಿದಂತೆ ಬಹುತೇಕ ಬೆಲೆ ಬಾಳುವ ವಸ್ತುಗಳನ್ನು ಮನ್ಸೂರ್ ಖಾನ್ ರೋಷನ್ ಬೇಗ್‍ಗೆ ಉಡುಗೊರೆಯಾಗಿ ನೀಡಿದ್ದ ಎಂಬ ಆರೋಪ ಕೇಳಿ ಬಂದಿತ್ತು.
ಶಿವಾಜಿನಗರದ ಕಾಂಗ್ರೆಸ್ ಶಾಸಕರಾಗಿದ್ದ ರೋಷನ್ ಬೇಗ್, ಮೈತ್ರಿ ಸರ್ಕಾರದಲ್ಲಿ ಶಾಸಕರ ಅಸಮಾಧಾನ ಸ್ಫೋಟಗೊಂಡಾಗ ತಾವೂ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.
ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ಪಾರಾಗಲು ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








