ಬೆಂಗಳೂರು: ರಾಜ್ಯದಲ್ಲಿ ಪ್ರೈಮರಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೊಗ್ಯ ಸಚಿವ ಸುಧಾಕರ್, ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಸಾರಿಗೆ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಯಾರಿಸಿರುವ ಅಭಿಪ್ರಾಯಗಳ ವರದಿಯನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಸಿ, ಶಾಲೆಗಳನ್ನು ಆರಂಭಿಸುವ ಕುರಿತಂತೆ ವ್ಯಕ್ತವಾಗಿರುವ ಸಲಹೆಗಳನ್ನು ಪ್ರಸ್ತಾಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸುವುದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಅದರಲ್ಲೂ, ಕೊರೊನಾ 2ನೇ ಅಲೆ ದೇಶಕ್ಕೆ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಲಸಿಕೆ ಇನ್ನೂ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬುದು ನಿರ್ಧಾರವಾಗುವ ಸಾಧ್ಯತೆ ಇದೆ.
ಶಾಲೆ ರೀಓಪನ್ ಬಗ್ಗೆ ಸುರೇಶ್ ಕುಮಾರ್ ಸುಳಿವು..!
ಕೊರೊನಾ ಕಾರಣಕ್ಕೆ ಕಳೆದ 8 ತಿಂಗಳಿಂದ ಮುಚ್ಚಿರುವ ಶಾಲೆಗಳನ್ನು ರೀಓಪನ್ ಮಾಡುವ ಸಾಧ್ಯತೆಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುಳಿವು ನೀಡಿದ್ದಾರೆ.
ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ ನಗರ-ಪಟ್ಟಣ ಪ್ರದೇಶಗಳ ಕಾಸಗಿ ಶಾಲೆಗಳ ಮಕ್ಕಳು ಆನ್‍ಲೈನ್ ಮೂಲಕ ಶಿಕ್ಷಣ ಪಡೆಯುತ್ತಿದ್ದರೆ, ಸರ್ಕಾರಿ ಹಾಗೂ ಗ್ರಾಮೀಣ ಪ್ರದೇಶಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಬಾಲಕಾರ್ಮಿಕ ಸಮಸ್ಯೆ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಶಾಲೆಗಳನ್ನು ಆರಂಭಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ, ಕೊರೊನಾ ಭೀತಿ ಇರುವುದರಿಂದ ಪೋಷಕರ ಸಲಹೆಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುತ್ತೇವೆ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ ಎಂದು ಸುರೇಶ್ ಕುಮಾರ್ ದ್ವಂದ್ವದ ಹೇಳಿಕೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel