ಸತತ ನಾಲ್ಕನೇ ದಿನವೂ ಪೆಟ್ರೋಲ್ ಡಿಸೇಲ್ ದರ ಏರಿಕೆ
ಬೆಂಗಳೂರು : ಸತತ ನಾಲ್ಕನೇ ದಿನವೂ ದೇಶದಲ್ಲಿ ಪೆಟ್ರೋಲ್ ಡಿಸೇಲ್ ದರ ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡಿದೆ. ಈ ಹಿನ್ನೆಲೆ ದೇಶದಲ್ಲೂ ತೈಲದ ಬೆಲೆ ಹೆಚ್ಚಾಗುತ್ತಿದೆ.
ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 7 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 18 ಪೈಸೆ ಏರಿಕೆ ಮಾಡಲಾಗಿದೆ.
ಈ ಹಿನ್ನೆಲೆ ದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 81.53 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 71.25 ರೂಪಾಯಿಗೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇವತ್ತು ಪೆಟ್ರೋಲ್ ಬೆಲೆ ಲೀಟರ್ ಗೆ 84.53 ರೂ. ಇದ್ದರೆ, ಡೀಸೆಲ್ ಬೆಲೆ 71.25 ರೂ. ಇದೆ.
ತಮಿಳುನಾಡಿಗೆ ಅಪ್ಪಳಿಸಲಿದೆ ನಿವಾರ್ ಚಂಡಮಾರುತ : ಅಧಿಕ ಮಳೆ ಸಾಧ್ಯತೆ
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 84.59 ರೂ. ಡೀಸೆಲ್ ಬೆಲೆ ಲೀಟರ್ ಗೆ 76.52 ರೂ. ಗೆ ತಲುಪಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 84.25 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್ ಗೆ 75.53 ರೂ.ತಲುಪಿದೆ.
ಸಂಪ್ರದಾಯ ಮರೆತ ಕೇಂದ್ರ
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರದಲ್ಲಿ ಹೆಚ್ಚಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು,
ಹಾಗೆಯೇ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಮಾಡೋದು ಈ ಹಿಂದಿನಿಂದ ನಡೆದುಕೊಂಡು ಬಂದಿರುವ ರೀತಿ.
ಆದ್ರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಮರೆತಂತ್ತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










