ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ : ಅಶ್ವಥ್ ನಾರಾಯಣ್ ಹೀಗೆ ಹೇಳಿದ್ದೇಕೆ..?
ತುಮಕೂರು : ರಾಜ್ಯ ಬಿಜೆಪಿಯಲ್ಲಿ ಬೆಳಗಾವಿ ಸಾಹುಕಾರ್ ನಯಾ ಪವರ್ ಪಾಯಿಂಟ್ ಆಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಸಚಿವಾಕಾಂಕ್ಷಿಗಳು ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಅಲ್ಲದೆ ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಬಿಗ್ ಬಾಸ್ ಗಳ ಜೊತೆ ಚರ್ಚೆ ನಡೆಸಿದ್ದಾರೆ. ಹೀಗಾಗಿ ಪಕ್ಷದಲ್ಲಿ ಕೆಲವರು ಬೆಳಗಾವಿ ಸಾಹುಕಾರ್ ಅವರನ್ನು ಕಿಂಗ್ ಮೇಕರ್ ಎಂದು ಕರೆಯುತ್ತಿದ್ದಾರೆ.
ಇದು ಸದ್ಯ ಬಿಜೆಪಿಯಲ್ಲಿ ಯುದ್ಧಕ್ಕೆ ಕಾರಣವಾಗಿದ್ದು, ಕೆಲ ಮೂಲ ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷವಾಗಿ ಕತ್ತಿ ಮಸೆಯುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ಸಚಿವ ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ : ಡಿಕೆಶಿ
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ್, ಸಚಿವ ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ. ಅವರು ಉತ್ಸಾಹದಿಂದ ಕೆಲಸ ಮಾಡುತ್ತಾರೆ.
ತನ್ನ ಸಹೋದ್ಯೋಗಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಕಿಂಗ್ ಮೇಕರ್ ಎಂದು ಕೆಲವರು ತಿಳಿದುಕೊಂಡಿದ್ದಾರಷ್ಟೆ ಎಂದು ರಮೇಶ್ ಜಾರಕಿಹೊಳಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಸಿಬಿಐ ನೋಟಿಸ್ ಬಗ್ಗೆ ಡಿಕೆಶಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮುಖ್ಯಮಂತ್ರಿ ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದ ಅಶ್ವಥ್, ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೆ. ಉಳಿದ ಅವಧಿಗೂ ಬಿಎಸ್ ವೈ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










