ಕೊರೊನಾ ಹರಡುವಿಕೆ ತಡೆಗಟ್ಟಲು ದೇಶ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ಮನೆ ಮನೆಗೆ ತರಕಾರಿ ತಲುಪಿಸುವ ಕಾರ್ಯಕ್ಕೆ ಮುಂದಾಗಿದೆ. ದೇಶವೂ 21 ದಿನಗಳ ಕಾಲ ಲಾಕ್ ಡೌನ್ ಆಗಿರುವ ಕಾರಣಕ್ಕೆ ಜನರಲ್ಲಿ ಆತಂಕ ಮೂಡಿದೆ. ಹಾಗಾಗಿ ಅಗತ್ಯ ವಸ್ತುಗಳು ಪಡೆಯಲು ಮನೆಯಿಂದ ಹೊರ ಬರುತ್ತಿದ್ದಾರೆ. ಇದರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಹಾಗಾಗಿ ಕೊಪ್ಪಳ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ತರಕಾರಿ ನೀಡುವ ಕೆಲಸ ಮಾಡುತ್ತಿದ್ದಾರೆ. ಇಲಾಖೆ ಸಂಪರ್ಕದಲ್ಲಿರುವ ರೈತರಿಂದ ತರಕಾರಿಯನ್ನು ಖರೀದಿ ಮಾಡಿ, ಆ ತರಕಾರಿಯನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು ಮಾಡುತ್ತಿದ್ದಾರೆ. ಮೊದಲ ಹಂತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಈ ಸೌಲಭ್ಯವನ್ನು ಜಾರಿ ಮಾಡಲಾಗಿದೆ.
ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೆರುಗು ಸಿಗಲಿದೆ. ಅರಮನೆ ನಗರಿಯ ಅಂಗಳದಲ್ಲಿ ಅಕ್ಟೋಬರ್ 18 ಮತ್ತು...








