ಬೆಂಗಳೂರು: ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ಸುಧಾ ಗೋಲ್ಡ್ ಖಜಾನಾಕ್ಕೆ ಎಸಿಬಿ ಮತ್ತೆ ಶಾಕ್ ಕೊಟ್ಟಿದೆ.
ಇತ್ತೀಚೆಗೆ ಸುಧಾ ಕೊಡಿಗೇನಹಳ್ಳಿಯ ಐಷಾರಾಮಿ ಬಂಗಲೆ, ಹುಟ್ಟೂರು ಉಡುಪಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿ, ರಾಶಿಗಟ್ಟಲೆ ಚಿನ್ನಾಭರಣ ಜಪ್ತಿ ಮಾಡಿದ್ದ ಎಸಿಬಿ ಅಧಿಕಾರಿಗಳು, ಇಂದು ಸುಧಾ ಆಪ್ತರು, ಕುಟುಂಬಸ್ಥರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಸುಧಾ ಅವರ ಏಜೆಂಟರೆಂದು ಶಂಕಿಸಲಾದ ಬೆಂಗಳೂರು ದಕ್ಷಿಣ ತಾಲೂಕಿನ ಭೀಮನಕುಪ್ಪೆಯಲ್ಲಿ ಮೂವರ ಮನೆಗಳು, ಮಲ್ಲತ್ತಹಳ್ಳಿಯ ಎನ್‍ಜಿಇಎಫ್ ಬಡಾವಣೆ, ಸೂಲಿಕೆರೆಯ ರಾಮಸಂದ್ರ ಮತ್ತು ಕೆ.ಕೆ ಬಡಾವಣೆಗಳಲ್ಲಿ ತಲಾ ಒಬ್ಬರ ಮನೆಗಳ ಮೇಲೆ ಎಸಿಬಿ ದಾಳಿ ನಡೆದಿದೆ.

ಭೀಮನಕುಪ್ಪೆಯ ರಿಯಲ್ ಎಸ್ಟೇಟ್ ಏಜೆಂಟ್ ಮಹೇಶ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅದೇ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಮನೆ ಮೇಲೂ ದಾಳಿ ನಡೆಸಲಾಗಿದೆ. ಭೀಮನಕುಪ್ಪೆಯಲ್ಲಿ ಮೂರು ಕಡೆ, ಎನ್‍ಜಿಇಎಫ್ ಲೇಔಟ್, ರಾಮಸಂದ್ರ, ಕೆಕೆ ಲೇಔಟ್ ನಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಪತಿ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ. ಸುಧಾ ಅವರು ಆದಾಯಕ್ಕಿಂತ ಜಾಸ್ತಿ ಆಸ್ತಿಪಾಸ್ತಿ ಹೊಂದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








