ವಿಟ್ಲ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳನ್ನು ಹೆಚ್ಚಾಗುತ್ತಲೇ ಇದ್ದು, ವಿಟ್ಲದಲ್ಲಿ ವ್ಯಕ್ತಿಯೊಬ್ಬ ಕೊರೊನಾ ವೈರಸ್ ಕುರಿತಾಗಿ ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದಾನೆ. ಈ ಹಿನ್ನೆಲೆ ಆತನನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.ವಿಟ್ಲ ಕಸಬಾ ಗ್ರಾಮದ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಬಂಧಿತ ಆರೋಪಿಯಾಗಿದ್ದಾನೆ.
ಜಯಕರ ಆಚಾರ್ಯ ವಿರುದ್ಧ ವಿಟ್ಲ ಮುಸ್ಲಿಮ್ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಹಾಗೆಯೇ ಈ ಪಕ್ರರಣಕ್ಕೆ ಸಂಬಂಧಿಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವಿಟ್ಲ ಮೇಗಿನಪೇಟೆ ಶಾಲಾ ಬಳಿಯ ನಿವಾಸಿ, ಮಂಗಳೂರು ಎಲ್‌ಐಸಿ ಉದ್ಯೋಗಿ ರೋಹಿತ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.








