cಅದರ ಪ್ರಕಾರ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಹಾಗೂ ಸ್ವಚ್ಛತಾ ಸಿಬ್ಬಂದಿ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ್ದೇನೆ.ವೈದ್ಯರು, ದಾದಿಯರು ಹಾಗೂ ಸ್ವಚ್ಛತಾ ಸಿಬ್ಬಂದಿ ಬಹಳ ಉತ್ಸುಕತೆಯಿಂದ ಕೆಲಸ ಮಾಡುತ್ತಿರುವುದು ಕಂಡು ತಮಗೆ ಸಂತಸವಾಗಿದೆ.ಕೊರೊನಾ ಸೋಂಕು ಪಸರಿಸದಂತೆ ತಡೆಯುವಲ್ಲಿ ಹಾಗೂ ಆಸ್ಪತ್ರೆಯಲ್ಲಿ ಸೋಂಕಿತರನ್ನು ನೋಡಿಕೊಳ್ಳುತ್ತಿರುವುದಕ್ಕೆ ಅವರಿಗೆ ಕೋಟಿ ನಮನಗಳು.ಕೊರೊನಾದಂತಹ ಮಹಾಮಾರಿ ರಾಜ್ಯ ಸೇರಿದಂತೆ ರಾಷ್ಟ್ರವನ್ನೇ ತಲ್ಲಣಗೊಳಿಸಿದೆ.ದೇಶವನ್ನು ಲಾಕ್ ಡೌನ್ ಗೊಳಿಸಿರುವುದು ಒಳ್ಳೆಯ ಸಂಗತಿ. ಕೊರೊನಾ ಮಹಾಮಾರಿ ಓಡಿಸಲು ಹಾಗೂ ದೇಶದ ಜನರನ್ನು ಸುರಕ್ಷಿತಗೊಳಿಸಲು ರಾಜ್ಯ ಸರ್ಕಾರ, ಮುಖ್ಯಮಂತ್ರಿಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಲಾಕ್ ಡೌನ್ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಈ ನಿಟ್ಟಿನಲ್ಲಿ ಕ್ಷೇತ್ರ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.ಟಾರ್ಸ್‌ಪೋರ್ಸ್ ಮೇಲೆ ಜನರಿಗೆ ಇನ್ನಷ್ಟು ನಂಬಿಕೆ ಬರುವಂತೆ ಕೆಲಸ ಮಾಡಲಾಗುವುದು.ಲಾಕ್‌ಡೌನ್‌ಗಾಗಲೀ ಕೊರೊನಾ ಮಾರಿಗಾಗಲೀ ಜನತೆ ಭಯಪಡುವುದು ಬೇಡ.ಜನರ ಜೊತೆ ಸರ್ಕಾರ ಇದೆ ಎಂದು ಹೇಳಿದರು.ಜನರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವುದು ಪೊಲೀಸರ ಕೆಲಸವಷ್ಟೇ ಅಲ್ಲ. ಜನರು ಸ್ವಯಂಪ್ರೇರಿತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಲಾಕ್‌ಡೌನ್‌ಗೆ ಸಹಕರಿಸಬೇಕು.ಮನೆಯಿಂದ ಹೊರಬರದ ರೀತಿಯಲ್ಲಿ ಜನರು ತಮ್ಮನ್ನು ತಾವು ನಿರ್ಬಂಧಿಸಿಕೊಳ್ಳಬೇಕು.ಯಾರೂ ಎದೆಗುಂದದೇ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ಏಪ್ರಿಲ್ 15ರವರೆಗೆ ಲಾಕ್‌ಡೌನ್‌ಗೆ ಸಹಕರಿಸಬೇಕು ಎಂದು ಕೃಷಿ ಸಚಿವರು ಕರೆ ನೀಡಿದರು.
ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್ಪಾಸ್ ನೀಡಿದ ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...








