niwar cyclone
ತಮಿಳುನಾಡಿಗೆ ವರುಣಾಘಾತ: ಇನ್ನೂ ಹಲವು ರಾಜ್ಯಗಳಿಗೂ ಕಾದಿದೆ ‘ನಿವಾರ್’ ಗಂಡಾಂತರ..!
ನ. 25 ರಾತ್ರಿ ಸುಮಾರು 8 ಗಂಟೆಗೆ ‘ನಿವಾರ್’ ಚಂಡಮಾರುತ ತಮಿಳುನಾಡಿನ ಕರಾವಳಿ ಭಾಗಗಗಳಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಘಾತಕಾರಿ ವಿಚಾರವೆಂದರೆ ಈ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದ್ದು, ವರುಣಾಘಾತವಾಗಲಿದೆ. ಹಲವೆಡೆ ದಾರಾಕಾರ ಮಳೆಯಾಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನ.24 ರಂದೇ ತೀವ್ರ ಸ್ವರೂಪ ಪಡೆದುಕೊಂಡಿರುವ ನಿವಾರ್ ಚಂಡಮಾರುತ, ನವ.25ರ ರಾತ್ರಿ 8ಗಂಟೆ ಸುಮಾರಿಗೆ ತಮಿಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದು ಹೋಗಲಿದೆ. ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಈ ಭಾರಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇತ್ತ ಚಂಡಮಾರುತದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ, ಮೋಟಾರ್ ಬೋಟ್ಸ್ ಸೇರಿ ಇನ್ನಿತರೆ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನೂ ಈಗಾಗಲೇ ಮಂಗಳವಾರದಿಂದಲೇ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಳೆಯಾಗ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನ. 25ರ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಚೆನ್ನೈ ಮಾರ್ಗದ 12 ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕಣ್ಣೂರು, ಕೊಜಿಕೋಡ್, ವಿಜಯವಾಡ, ತಿರುಚಿ, ತೂತ್ತುಕುಡಿ, ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನಗಳ ಸಂಚಾರ ಸದ್ಯ ರದ್ದಾಗಿದೆ. ತಮಿಳುನಾಡು, ಪಾಂಡಿಚೆರಿಯಲ್ಲಿ ಸೇನೆಯಿಂದ 12 ಎಚ್ಎಡಿಆರ್ ತಂಡಗಳ ನಿಯೋಜನೆ ಮಾಡಲಾಗಿದೆ.
ಅಲ್ಲದೇ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಚಂಡಮಾರುತದ ಪರಿಸ್ಥಿತಿ ಎದುರಿಸಲು ಸರ್ವಸನ್ನದ್ಧರಾಗಿದ್ದಾರೆ. ಇತ್ತ ನಿವಾರ್ ಚಂಡಮಾರುತದ ಜೊತೆಗೆ ಬುಧವಾರ ಆಂಧ್ರಪ್ರದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಿದೆ. ಗತಿ ಚಂಡಮಾರುತವೂ ಸಹ ಆಂಧ್ರಪ್ರದೇಶದ ಕರಾವಳಿ ಬಾಗಗಳಿಗಪ್ಪಳಿಸಲಿದೆ. ಕೂಡ ದಾಳಿ ನಡೆಸಲಿದೆ.
niwar cyclone
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








