ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಮತ್ತು ವೈದ್ಯರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯ 20 ಹಾಸಿಗೆಗಳ ಆಯುಷ್ ಕಟ್ಟಡದಲ್ಲಿ ಕೊರೊನಾ ಶಂಕಿತರನ್ನು ದಾಖಲಿಸಿಲಾಗುತ್ತದೆ. ಅವರಲ್ಲಿ ಯಾರಿಗಾದರೂ ಪಾಸಿಟಿವ್ ಕಂಡು ಬಂದಲ್ಲಿ ಅವರನ್ನು ಸೂಪರ್ ಸ್ಪೆಶಾಲಿಟಿ ಕಟ್ಟಡದ ವಾರ್ಡಿಗೆ ವರ್ಗಾವಣೆ ಮಾಡಲಾಗುವುದು ಎಂದರು. ಹಾಗೆಯೇ ಈಗಾಗಲೇ ಆಸ್ಪತ್ರೆಯಲ್ಲಿ ಬೇರೆ ಕಾಯಿಲೆಗಳ ಚಿಕಿತ್ಸೆ ಪಡೆಯಲು ಒಳರೋಗಿಗಳಾಗಿ ದಾಖಲಾಗಿರುವ ಸುಮಾರು 218 ರೋಗಿಗಳನ್ನು ಹಂತ ಹಂತವಾಗಿ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೂರು ದಿನಗಳ ಒಳಗಾಗಿ ವರ್ಗಾವಣೆ ಮಾಡಲಾಗುವುದು. ಹೊರರೋಗಿ ಚಿಕಿತ್ಸೆಗಾಗಿ ಬರುವವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ. ಹಂತಹಂತವಾಗಿ 705 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯ ಹಳೆ ಕಟ್ಟಡದ ವಾರ್ಡ್ಗಳನ್ನು ಕೊರೊನಾ ಪ್ರಕರಣಗಳನ್ನು ದಾಖಲೆ ಮಾಡಲು ಉಪಯೋಗಿಸಲಾಗುವುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ
ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...








