ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ರೋಷನ್ ಬೇಗ್ ಅನಾರೋಗ್ಯದಿಂದ ಬಳಲುತ್ತಿದ್ದು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆಯಷ್ಟೇ ಸಿಬಿಐ ಕೋರ್ಟ್, ಹೆಚ್ಚಿನ ವಿಚಾರಣೆಗೆ ರೋಷನ್ ಬೇಗ್ ಅವರನ್ನು 3 ದಿನಗಳ ಸಿಬಿಐ ಕಸ್ಟಡಿಗೆ ನೀಡಿತ್ತು. ಆದರೆ, ಕೋರ್ಟ್ ಆದೇಶದೊಂದಿಗೆ ರೋಷನ್ ಬೇಗ್‍ರನ್ನು ವಶಕ್ಕೆ ಪಡೆಯಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದ ಸಿಬಿಐ ಅಧಿಕಾರಿಗಳು ವಾಪಸ್ ಬಂದಿದ್ದಾರೆ.
ಕಳೆದ ಒಂದು ವಾರದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೋಷನ್ ಬೇಗ್ ಬಿಪಿ, ಶುಗರ್ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಸಣ್ಣ ಪ್ರಮಾಣದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಕಳೆದ ವಾರ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್‍ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸಿದಾಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಐಎಂಎ ಮಾಲೀಕ ಮನ್ಸೂರ್ ಖಾನ್, ರೋಷನ್ ಬೇಗ್ 400 ಕೋಟಿ ರೂ. ಹಣ ಕೊಟ್ಟಿರುವುದಾಗಿ ಹೇಳಿದ್ದ ಆಡಿಯೋ ಬಹಿರಂಗಪಡಿಸಿದ್ದಾನೆ. ಈ ಆಡಿಯೋ ಹೇಳಿಕೆ ಆಧರಿಸಿ ಸಿಬಿಐ ಅಧಿಕಾರಿಗಳು ರೋಷನ್ ಬೇಗ್‍ರನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಸಿಬಿಐ ಅಧಿಕಾರಿಗಳು ನಿನ್ನೆ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿತ್ತು. ಅಷ್ಟರಲ್ಲೇ ಆಸ್ಪತ್ರೆಗೆ ದಾಖಲಾಗಿದ್ದರಿಂದ ಇನ್ನಷ್ಟು ದಿನ ಕಾಯಲೇಬೇಕಾದ ಅನಿವಾರ್ಯತೆ ಎದುರಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








