ಸಿದ್ದರಾಮಯ್ಯನವರೇ ಮೊದ್ಲು ನಿಮ್ಮ ತಟ್ಟೆ ನೋಡಿಕೊಳ್ಳಿ : ರೇಣುಕಾಚಾರ್ಯ
ಬೆಂಗಳೂರು : ಸಿದ್ದರಾಮಯ್ಯ ನವರೇ ಮೊದಲು ನಿಮ್ಮ ತಟ್ಟೆಯಲ್ಲಿ ಏನಿದೆ ಎಂಬುದನ್ನು ನೋಡಿಕೊಳ್ಳಿ. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆಯಾಗುತ್ತದೆ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರು ಹಗಲುಗನಸು ಕಾಣುವುದು ಬೇಡ. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ
ಪಕ್ಷದ ರಾಷ್ಟ್ರೀಯ ನಾಯಕರೇ ಯಡಿಯೂರಪ್ಪನವರ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರು ಪ್ರತಿದಿನ ಸಿಎಂ ಬದಲಾವಣೆಯಾಗುತ್ತಿದ್ದಾರೆಂದು ಕನಸು ಕಾಣುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.
ಇನ್ನು ಸಿದ್ದರಾಮಯ್ಯ ಸಿಎಂ ಆಗಿದ್ದಾಗಿದ್ದಾಗ ಕಾಂಗ್ರೆಸ್ ನಲ್ಲಿ ಆಂತರಿಕ ಜಗಳವಿತ್ತು. `ಸೈನಿಕ’ನ ಪರ ಅಖಾಡಕ್ಕಿಳಿದ `ಸಾಹುಕಾರ್’ : ಯೋಗೇಶ್ವರ್ ಮಂತ್ರಿಗಿರಿ ಪಕ್ಕಾ..!
ಇದೇ ಕಾರಣಕ್ಕಾಗಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿತು ಎಂದು ಕುಟುಕಿದ ರೇಣುಕಾಚಾರ್ಯ, ಮೊದಲು ನಿಮ್ಮ ತಟ್ಟೆಯಲ್ಲಿ ಏನಿದೆ ಎಂಬುದನ್ನು ನೋಡಿಕೊಳ್ಳಿ. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಿ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.
ಅಲ್ಲದೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಸಿದ ರೇಣುಕಾಚಾರ್ಯ, ಮೊದಲು ನಿಮ್ಮ ಪಕ್ಷದಲ್ಲಿರುವ ಗುಂಪುಗಾರಿಕೆಯನ್ನು ಸರಿಪಡಿಸಿಕೊಂಡು ನಂತರ ಬಿಜೆಪಿ ಬಗ್ಗೆ ಮಾತನಾಡಿ, ಇದನ್ನು ಸಿದ್ದರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕೆಂದು ಕಿಡಿಕಾರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









