ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆಯುವಂತೆ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಮಾಡೀಯೇ ತೀರುತ್ತೇವೆ ಎಂದು ಪಟ್ಟು ಹಿಡಿದಿದ್ದರೆ, ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ನಿರ್ಧಾರದಿಂದ ಮುಖ್ಯಮಂತ್ರಿ ಬಿ.ಎಸ್ ಹಿಂದೆ ಸರಿದಿಲ್ಲ. ಹೀಗಾಗಿ ತಾಳ್ಮೆ ಕಳೆದುಕೊಂಡಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಯಡಿಯೂರಪ್ಪ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶ ಹಿಂಪಡೆಯಲು ಇನ್ನೂ ಕಲಾವಕಾಶ ಇದೆ. ಒಂದು ನೀವು ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಖಚಿತ. ಅದಕ್ಕೂ ಮಣಿಯದಿದ್ದರೆ ರಾಜ್ಯಾದ್ಯಂತ ಜೈಲ್ ಬರೋ ಚಳವಳಿ ನಡೆಸಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಹುಚ್ಚು ಹಿಡಿದಿದೆ. ನಾವು ಹಲವಾರು ಬಾರಿ ಕರ್ನಾಟಕ ಬಂದ್ ಮಾಡಿದ್ದೆವೆ. ಆದರೆ ಈ ರೀತಿ ಹೋರಾಟ ಹತ್ತಿಕ್ಕಲು ಯಾವ ಮುಖ್ಯಮಂತ್ರಿಯೂ ಯತ್ನಿಸಿರಲಿಲ್ಲ. ನೀವು ಬಂದ್ ತಡೆಯಲು ಪ್ರಯತ್ನ ಮಾಡಿದರೆ ನಾವು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಸವಾಲು ಹಾಕಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಾಟಾಳ್, ಕೂಡಲೇ ಮರಾಠಿ ಅಭಿವೃದ್ಧಿ ಪ್ರಾಧಿಕಾರ ಆದೇಶ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಉಪಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕನ್ನಡಿಗರಿಗೆ ಸಿಎಂ ಯಡಿಯೂರಪ್ಪ ದ್ರೋಹ ಬಗೆಯುತ್ತಿದ್ದಾರೆ. ಮರಾಠಿಗರು ಪ್ರಾಧಿಕಾರ ಕೇಳದಿದ್ದರೂ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಾರೆ. ಹಾಗಾದರೆ ರಾಜ್ಯದಲ್ಲಿ ತಮಿಳರು, ಮಾರ್ವಾಡಿಗಳು, ಗುಜರಾತಿಗಳು ಸೇರಿದಂತೆ ಬೇರೆ ಬೇರೆ ಭಾಷಿಕರಿದ್ದಾರೆ ಅವರೆಲ್ಲರಿಗೂ ಪ್ರಾಧಿಕಾರ ರಚನೆ ಮಾಡುತ್ತೀರಾ ಎಂದು ಸಾ.ರಾ ಗೋವಿಂದ್ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel