priyanka vadra
ಅನ್ನದಾತರ ಕೂಗು ಕೇಂದ್ರಕ್ಕೆ ಕೇಳಿಸುತ್ತಿಲ್ಲ, ಕೇಳುವ ತಾಳ್ಮೆಯೂ ಇಲ್ಲ : ಪ್ರಿಯಾಂಕಾ ವಾದ್ರಾ..!
ನವದೆಹಲಿ: ರೈತರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ದೆಹಲಿಯಲ್ಲಿ ಜಲ ಫಿರಂಗಿ, ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್ ನಡೆಸುತ್ತಿರೋದನ್ನ ಕಾಂಗ್ರೆಸ್ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರೋ ಅವರು, ಬಿಜೆಪಿಗೆ ರೈತರ ಕೂಗು ಆಲಿಸುವಷ್ಟು ತಾಳ್ಮೆ ಇಲ್ಲ, ಪ್ರತಿಭಟನೆಯನ್ನು ಹತ್ತಿಕ್ಕಲು ಜಲ ಫಿರಂಗಿಯನ್ನು ಬಳಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ : ಎಂಟಿಬಿ ಅಸಮಾಧಾನ
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಕೃಷಿ ಮಸೂದೆ ವಿರುದ್ಧ ಅನ್ನದಾತರು ಪ್ರತಿಭಟನೆಗೆ ಇಳಿದಿದ್ದಾರೆ. ಆದ್ರೆ ಈ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಜಲಫಿರಂಗಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿರುವ ಪ್ರಯಾಂಕಾ ವಾದ್ರಾ ರೈತರ ಧ್ವನಿ ಕೇಳುವ ಬದಲು ಬಿಜೆಪಿ ಸರ್ಕಾರ ಅವರ ವಿರುದ್ಧ ಜಲಫಿರಂಗಿ ಬಳಕೆ ಮಾಡುತ್ತಿದೆ. ಬಂಡವಾಳಶಾಹಿಗಳಿಗೆ ಬ್ಯಾಂಕುಗಳು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳು ಮತ್ತು ಸಾಲ ಮನ್ನಾ ಮಾಡಲಾಗುತ್ತಿದ್ದು, ರೈತರಿನಿಂದ ಎಲ್ಲವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
priyanka vadra
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel