ಕೊರೊನಾದಿಂದ ಮೃತಪಟ್ಟ ಬಡವರಿಗೆ 5 ಲಕ್ಷ ಪರಿಹಾರ
ಮಂಗಳೂರು : ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಬಡ ಬಿಪಿಎಲ್ ಕಾರ್ಡ್ ದಾರರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಒತ್ತಾಯ ಮಾಡಿದ್ದಾರೆ.
ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ದಾರರಿಗೆ 5 ಲಕ್ಷ ರೂ ಪರಿಹಾರ ನೀಡುವ ಬಗ್ಗೆ ಮುಂದಿನ ವಿಧಾನಸಭೆ ಕಲಾಪದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇವೆ.
ಪ್ರಧಾನ ಮಂತ್ರಿಯವರು ಕೋವಿಡ್ ಲಸಿಕೆ ಬಂದಲ್ಲಿ ಬಿಹಾರ ರಾಜ್ಯಕ್ಕೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿಯೂ ಇದೇ ರೀತಿ ಉಚಿತವಾಗಿ ಲಸಿಕೆ ನೀಡಲಿ ಎಂದು ಒತ್ತಾಯಿಸಿದರು. ರೋಹಿಣಿ ಸಿಂಧೂರಿ ಬೇಸಿಕ್ ನಾಲೆಡ್ಜ್ ಇಲ್ಲದ ಐಎಎಸ್ ಅಧಿಕಾರಿ : ರಘು ಆಚಾರ್
ರಾಜ್ಯದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ಸುಮಾರು 20 ಸಾವಿರ ಮಂದಿಯನ್ನು ಗುರುತಿಸಿ ಅವರಿಗೆ ಉಚಿತವಾಗಿ ಲಸಿಕೆ ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪಂಚರತ್ನ, ಪಂಚಸೂತ್ರ ತಂತ್ರದಿAದ ಗೆಲುವು ಶತಸಿದ್ಧ: ನಳಿನ್ ಕುಮಾರ್ ಕಟೀಲ್ ವಿಶ್ವಾಸ
ಲಸಿಕೆ ಕೊಡುವಾಗ ಎಪಿಎಲ್ – ಬಿಪಿಎಲ್ ನೋಡುವ ಅವಶ್ಯಕತೆ ಇಲ್ಲ. ಆದ್ದರಿಂದ ಇಡೀ ರಾಜ್ಯದ ಜನತೆಗೆ ಉಚಿತ ಲಸಿಕೆ ಪೂರೈಕೆ ಮಾಡುವ ಬಗ್ಗೆ ಸಿಎಂ ಹಾಗೂ ಆರೋಗ್ಯ ಸಚಿವರು ತಕ್ಷಣ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು.
ಇನ್ನು ದೇಶದಲ್ಲಿ ಕೊರೊನಾ ಎರಡನೇ ಅಲೆ ಬಗ್ಗೆ ಚರ್ಚೆಗಳ ನಡೆಯುತ್ತಿವೆ. ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ದೆಹಲಿ, ಗುಜರಾತ್, ಮುಂಬೈ ಮತ್ತಿತರ ನಗರಗಳಲ್ಲಿ ರಾತ್ರಿ ಕಫ್ರ್ಯೂ ಜಾರಿಗೊಳಿಸಲಾಗಿದೆ.
ಆದ್ರೆ ರಾಜ್ಯದಲ್ಲಿ ಎರಡನೇ ಹಂತದ ಕೋವಿಡ್ ಸೋಂಕು ಎದುರಿಸಲು ಈವರೆಗೆ ಯಾವುದೇ ಪೂರ್ವ ತಯಾರಿ ನಡೆದಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









