ks eshwarappa
ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ : ಕೆ.ಎಸ್. ಈಶ್ವರಪ್ಪ
ಬೆಳಗಾವಿ : ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಾನು ಮಾಧ್ಯಮಗಳಲ್ಲಿ ರಾತ್ರಿ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ.
ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ..? ಬಾಂಬ್ ಸಿಡಿಸಿದ ಡಿಕೆಶಿ..!
ರಾಜಕೀಯ ಒತ್ತಡದಿಂದ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ಸಂತೋಷ್ ಕುಟುಂಬಸ್ಥರು ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಜ್ಯ ಬಿಜೆಪಿಯಲ್ಲಿ ಒಂದು ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಆದರೆ ಅವನು ಮಾತ್ರ ಯಾಕೆ ಆತ್ಮಹತ್ಯೆಗೆ ಯತ್ನ ಮಾಡಿದ. ಅವರ ವೈಯಕ್ತಿಕ ಸಮಸ್ಯೆ ನೂರು ಇರುತ್ತೆ, ಅದರ ಬಗ್ಗೆ ಅವರ ಮನೆಯವರನ್ನು ಕೇಳಬೇಕು.
ರಾಜಕೀಯ ಒತ್ತಡವಿದ್ದರೆ, ಅದೇನು ಎಂದು ನನಗೇನೂ ಗೊತ್ತು..? ಆತನೇ ಇಂತಹ ವ್ಯಕ್ತಿ ಇಂತಹ ಕಾರಣಗಳಿಂದ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಿ. ಆ ರೀತಿಯ ತೊಂದರೆ ಇದ್ದರೆ ಪೆÇಲೀಸ್ ಠಾಣೆಗೆ ದೂರು ಕೊಡಲಿ ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು ಅವರು ಮಾತನಾಡುವಾಗ ಘನತೆಯಿಟ್ಟುಕೊಂಡು ಮಾತನಾಡಬೇಕು. ಅವರ ಬಳಿ ವೀಡಿಯೋ ಇದ್ದರೆ ನಮಗೂ ತೋರಿಸಲಿ ಎಂದು ಬಹಿರಂಗ ಸವಾಲ್ ಹಾಕಿದರು.
ks eshwarapp
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel