ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 10 ನ್ಯೂಸ್ Of The Day : ದಿನದ ಪ್ರಮುಖ ಸುದ್ದಿಗಳು..!

Namratha Rao by Namratha Rao
November 28, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

top 10 news of the day

ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ಕೊಡಲ್ಲ : ಈಶ್ವರಪ್ಪ

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ತಯಾರಿ ಆರಂಭವಾಗಿದ್ದು, ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ನಿರತವಾಗಿವೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ “ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತಾ ಪ್ರಶ್ನೆ ಇಲ್ಲ. ಬೆಳಗಾವಿ ಲೋಕಸಭಾ ಟಿಕೆಟ್ ಕುರುಬರಿಗೆ ಕೊಡ್ತಿವೋ, ಲಿಂಗಾಯತರಿಗೆ ಕೊಡ್ತಿವೋ, ಒಕ್ಕಲಿಗರಿಗೆ ಕೊಡ್ತಿವೋ, ಬ್ರಾಹ್ಮಣರಿಗೆ ಕೊಡ್ತಿವೋ ಗೊತ್ತಿಲ್ಲ. ಆದ್ರೆ, ಮುಸಲ್ಮಾನರಿಗಂತೂ ಟಿಕೆಟ್ ಕೊಡಲ್ಲ ಎಂದು ಈಶ್ವರಪ್ಪ ಹೇಳಿದರು.

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ..? ಬಾಂಬ್ ಸಿಡಿಸಿದ ಡಿಕೆಶಿ..!

ಕಾರವಾರ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಆತ್ಮಹತ್ಯೆ ಯತ್ನ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸಂತೋಷ್ ವಿಡಿಯೋ ಕಾರಣಕ್ಕೆ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಹೇಳಿದ್ದಾರೆ. ವಿಡಿಯೋ ವಿಚಾರವಾಗಿ ಸಂತೋಷ್ ಅವರನ್ನು ಸಚಿವರು ಹಾಗೂ ಎಂಎಲ್‍ಸಿಯೊಬ್ಬರು ಬ್ಲಾಕ್‍ಮೇಲ್ ಮಾಡುತ್ತಿದ್ದರು. ವಿಡಿಯೋವನ್ನು ಮಂತ್ರಿ, ಸಚಿವರಿಗೆ ಕೊಟ್ಟಿದ್ದಾರಂತೆ. ಜತೆಗೆ ಪರ್ಸನಲ್ ವಿಡಿಯೋವನ್ನು ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಸತ್ಯ ಎಷ್ಟು, ಸುಳ್ಳು ಎಷ್ಟು ಎಂಬುದು ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ಹೊರತುಪಡಿಸಿದ ತನಿಖೆಯಾಗಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ : ಕೆ.ಎಸ್. ಈಶ್ವರಪ್ಪ

ಬೆಳಗಾವಿ : ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಾನು ಮಾಧ್ಯಮಗಳಲ್ಲಿ ರಾತ್ರಿ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ.

ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ : ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ ಕೊಡಲು ಹೊರಟಿರುವ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ವೀರಶೈವ ಲಿಂಗಾಯತರಿಗೆ ಒಬಿಸಿ ಮೀಸಲಾತಿ ಕೊಡಲು ಹೊರಟಿರುವ ಕ್ರಮ ಸರಿಯಿಲ್ಲ.

ಯಾವುದೇ ಜಾತಿ ಹಿಂದುಳಿದಿದೆ ಎಂದು ರಾಜ್ಯ ಸರ್ಕಾರ ಏಕಾಏಕಿ ತೀರ್ಮಾನಿಸಲಿಕ್ಕೆ ಆಗುವುದಿಲ್ಲ. ಅದನ್ನು ಗುರುತಿಸಲಿಕ್ಕಾಗಿಯೇ ಸಾಂವಿಧಾನಿಕವಾಗಿ ರಚನೆಗೊಂಡ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇದೆ. ಅಲ್ಲಿ ಅದು ಮೊದಲು ತೀರ್ಮಾನವಾಗಬೇಕು. ಆಧಾರ ಇಲ್ಲದೇ ಯಾವುದೇ ಜಾತಿ ಹಿಂದುಳಿದಿದೆ ಎಂದು ತೀರ್ಮಾನಿಸೋದು ಸರಿಯಲ್ಲ ಎಂದು ವಿವರಿಸಿದ್ದಾರೆ.

ಉಮಾಶ್ರೀ ಕಾರು ಅಪಘಾತ ಪ್ರಕರಣ: ಗಾಯಗೊಂಡಿದ್ದ ವೈದ್ಯೆ ಸಾವು

ಹುಬ್ಬಳ್ಳಿ:  ನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3ಕ್ಕೇರಿದೆ.  ಇದೇ ತಿಂಗಳ 21 ರಂದು  ಬಂಡಿವಾಡ ಗ್ರಾಮದ ಬಳಿ  ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ  ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ  ಗಾಯವಾಗಿತ್ತು. ಗಾಯಾಳುಗಳ ಪೈಕಿ ಒಬ್ಬರಾಗಿದ್ದ ಡಾ. ಸ್ಮಿತಾ  ಇಂದು ಮೃತಪಟ್ಟಿದ್ದಾರೆ.

ಸುವೆಂಡು ಅಧಿಕಾರಿ ರಾಜೀನಾಮೆ : ಬಿಜೆಪಿಗೆ ಸೇರಲು ಬಯಸಿದರೆ ಸ್ವಾಗತ – ಘೋಷ್

ಕೊಲ್ಕತ್ತಾ,ನವೆಂಬರ್28: ಪಶ್ಚಿಮ ಬಂಗಾಳ ಕ್ಯಾಬಿನೆಟ್ ಸಚಿವ ಸುವೆಂಡು ಅಧಿಕಾರಿ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಬಿಜೆಪಿಯ ದಿಲೀಪ್ ಘೋಷ್, ಅವರು ಬಿಜೆಪಿ ಸೇರಲು ಬಯಸಿದರೆ ಅವರಿಗೆ ಬಿಜೆಪಿ ಪಕ್ಷದಲ್ಲಿ ಸ್ವಾಗತವಿದೆ ಎಂದಿದ್ದಾರೆ.  ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಘೋಷ್, ಟಿಎಂಸಿಯಿಂದ ಸುವೆಂಡು ಅಧಿಕಾರಿಯ ನಿರ್ಗಮನವು ಕೇವಲ ಸಮಯದ ವಿಷಯವಾಗಿದೆ. ಆಡಳಿತ ಪಕ್ಷದ ಹಲವಾರು ನಾಯಕರು ಅದರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅವರಿಗೆ ನಮ್ಮ ಪಕ್ಷದ ಬಾಗಿಲುಗಳು ತೆರೆದಿವೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ಕ್ಯಾಬಿನೆಟ್ ಸಚಿವರು ಪಕ್ಷದ ಉನ್ನತ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಶುಕ್ರವಾರ ಅವರ ರಾಜೀನಾಮೆ ಆಡಳಿತ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.

ಬಾವಿಗೆ ಬಿದ್ದಿದ್ದ ಶ್ವಾನ ರಕ್ಷಣೆ ಮಾಡಿದ ಯುವಕರು

ಹುತಾತ್ಮ ಯೋಧನ ವಾಟ್ಸಾಪ್ ಚಾಟ್ ವೈರಲ್ ..!

ಶ್ರೀನಗರ, ನವೆಂಬರ್28: ಮುಂಬೈ ಭಯೋತ್ಪಾದಕ ದಾಳಿ ನಡೆದ 12 ನೇ ವರ್ಷದ ಸಂದರ್ಭದಲ್ಲಿ ಪ್ರಾಸಂಗಿಕವಾಗಿ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 20 ವರ್ಷದ ಯುವ ಸೈನಿಕ ಯಶ್ ದೇಶ್ಮುಖ್ ಅಕಾ ಯಶ್ ದಿಗಂಬಾರ್ ದೇಶ್ಮುಖ್ ಅವರ ವಾಟ್ಸಾಪ್ ಸಂದೇಶವು ಮಹಾರಾಷ್ಟ್ರದಲ್ಲಿ ವೈರಲ್ ಆಗಿದೆ.‌ WhatsApp chat jawan

ಜನನಿಬಿಡ ಶ್ರೀನಗರ ಪ್ರದೇಶದಲ್ಲಿ ಮೂರು ಭಯೋತ್ಪಾದಕರ ಹೊಂಚುದಾಳಿಗೆ ಬಲಿಯಾದ ಇಬ್ಬರು ಜವಾನರಲ್ಲಿ ಯಶ್ ದೇಶಮುಖ್ ಕೂಡ ಒಬ್ಬರು. ದಾಳಿಗೆ ಒಂದು ದಿನ ಮುಂಚಿತವಾಗಿ, ಯಶ್ ತನ್ನ ಸ್ನೇಹಿತನೊಂದಿಗೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಚಲಿಗಾಂವ್ ತಾಲ್ಲೂಕಿನಲ್ಲಿ ಮನೆಗೆ ಹಿಂದಿರುಗಿ ವಾಟ್ಸಾಪ್ ನಡೆಸಿದ್ದರು ಎಂಬುದು ಈಗ ತಿಳಿದು ಬಂದಿದೆ.

‘ಅದಿಪುರುಷ’ ನಿಗೆ ನಾಯಕಿ ಫೈನಲ್..!

ಡಾರ್ಲಿಂಗ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾವಾಗಿರುವ ಆದಿಪುರುಷ್ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಸಿನಿಮಾದಲ್ಲಿ ಪ್ರಭಾಸ್ ಶ್ರೀರಾಮನಾಗಿ ಕಾಣಿಸಿಕೊಳ್ತಾಯಿದ್ದು, ಬಾಲಿವುಡ್ ಖ್ಯಾತ ನಟ ಸೈಫ್ ಅಲಿಖಾನ್ ರಾವಣನಾಗಿ ಮಿಂಚಲಿದ್ದಾರೆ. ಸಿನಿಮಾದಲ್ಲಿ ನಾಯಕಿ ಯಾರಾಗಬಹುದು ಎಂಬ ಕುತೂಹಲ ಕುತೂಹಲಗಳಿಗೂ ತೆರೆಬಿದ್ದಿದೆ.  ಚಿತ್ರದಲ್ಲಿ ಸೀತೆ ಪಾತ್ರಕ್ಕೆ ನಾಯಕಿ ಫಿಕ್ಸ್ ಆಗಿದ್ದಾರಂತೆ. ಪ್ರಭಾಸ್ ಗೆ ಜೋಡಿಯಾಗಿ ಕೃತಿ ನಟಿಸುತ್ತಿದ್ದಾರೆ. ಈ ಮೂಲಕ  ಮೊದಲ ಬಾರಿಗೆ ಕೃತಿ ಹಾಗೂ ಪ್ರಭಾಸ್ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಈ ಚಿತ್ರ ಮುಂದಿನ ವರ್ಷ ಅಂದ್ರೆ ಜನವರಿಯಲ್ಲಿ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಸುದೀಪ್  ಜೊತೆಗೆ ‘ಪ್ಯಾಂಟಮ್’ ನಲ್ಲಿ ಹೆಜ್ಜೆ ಹಾಕಲಿದ್ದಾರಂತೆ ಕತ್ರಿನಾ ಕೈಫ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ‘ಫ್ಯಾಂಟಮ್’ ಸಿನಿಮಾ ಸದಾ ಒಂದೊಂದೇ ವಿಚಾರದಲ್ಲಿ ಸುದ್ದಿಯಲ್ಲಿಯೇ ಇದೆ. ಇದೀಗ ಈ ಸಿನಿಮಾಗೆ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಸುದೀಪ್ ಜೊತೆ ನಟಿಸಲಿದ್ದಾರೆ ಎನ್ನುವ ಸುದ್ದಿ ಇಇದೀಗ ವೈರಲ್ ಆಗಿದೆ. ಅಂದ್ಹಾಗೆ ಫ್ಯಾಂಟಮ್ ಸಿನಿಮಾದ ವಿಶೇಷ ಹಾಡಿನಲ್ಲಿ ಕತ್ರಿನಾ ಕೈಫ್ ಹೆಜ್ಜೆ ಹಾಕಲಿದ್ದಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ಸಿಕ್ಕಿದೆ. ಇನ್ನೂ ಕತ್ರೀನಾ ಬಾರದೇ ಇದ್ದ ಪಕ್ಷದಲ್ಲಿ, ನೋರಾ ಫತೇಹಿ ಎಂಟ್ರಿಯಾಗಲಿದ್ದಾರೆ ಎಂದು ಹೇಳಲಾಗ್ತಿದೆ.

ಸಿಡ್ನಿಯ ಕ್ರಿಕೆಟ್ ಮೈದಾನದಲ್ಲೂ ಅದಾನಿ ವಿರುದ್ಧ ಪ್ರತಿಭಟನೆ

ಅದಾನಿಯನ್ನು ವಿರೋಧಿಸುವವರು ಭಾರತದಲ್ಲಿ ಮಾತ್ರವಲ್ಲ.. ದೂರದ ಆಸ್ಟ್ರೇಲಿಯಾದಲ್ಲೂ ಇದ್ದಾರೆ.
ಹೌದು, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಅದಾನಿ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಲಾಗಿದೆ. ಪಂದ್ಯದ ಆರನೇ ಓವರ್ ವೇಳೆ ಮೈದಾನದೊಳಗೆ ನುಸುಳಿದ ಇಬ್ಬರು ಪ್ರತಿಭಟನಾಕಾರರು ಅದಾನಿ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ. ಭಿತ್ತಿ ಪತ್ರದಲ್ಲಿ ನೋ ಒಂದು ಬಿಲಿಯನ್ ಡಾಲರ್ ಅದಾನಿ ಲೋನ್ಸ್ ಎಂದು ಬರೆದಿತ್ತು. ಹಾಗೇ ಧರಿಸಿದ್ದ ಟೀ ಶರ್ಟ್ ನಲ್ಲಿ ಸ್ಟಾಪ್ ಅದಾನಿ.. ಸ್ಡಾಪ್ ಕೋಲ್ ಸ್ಟಾಪ್ ಅದಾನಿ..ಟೇಕ್ ಆಕ್ಷನ್ ಎಂದು ಬರೆದಿತ್ತು. ಪ್ರತಿಭಟನಾಕಾರರು ಮೈದಾನದೊಳಗೆ ಪ್ರವೇಶಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿಗಳು ಜಾಗ್ರತರಾದ್ರು. ಅಲ್ಲದೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿಗಳು ಮೈದಾನದಿಂದ ಹೊರಗಡೆ ಕರೆದುಕೊಂಡು ಹೋದ್ರು. ಈಗಾಗಲೇ ಕೋವಿಡ್ ನಿಂದಾಗಿ ಇಂಗ್ಲೆಂಡ್ ಮತ್ತು ಐಪಿಎಲ್ ನಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿಲ್ಲ. ಆದ್ರೆ ಆಸ್ಟ್ರೇಲಿಯಾ ಭಾರತ ನಡುವಿನ ಪಂದ್ಯಕ್ಕೆ ಪ್ರೇಕ್ಷಕರಿಗೆ ಪಂದ್ಯ ನೋಡಲು ಅವಕಾಶ ನೀಡಲಾಗಿತ್ತು. ಅದೇ ರೀತಿ ಕ್ರಿಕೆಟ್ ಮೈದಾನದಲ್ಲಿ ಈ ರೀತಿಯ ಪ್ರತಿಭಟನೆ ಹಾಗೂ ಕೆಲವೊಂದು ಅನುಚಿತ ವರ್ತನೆ ನಡೆಯುತ್ತಿರುವುದು ಇದೇನೂ ಹೊಸದಲ್ಲ. ಈ ಪ್ರತಿಭಟನೆ ಈಗ ಹೊಸ ಸೇರ್ಪಡೆಯಷ್ಟೇ..

top 10 news of the day

Tags: PrabhassiddaramiahSudeep
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram