ಮಡಿಕೇರಿ: ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬಿಜೆಪಿ ಶಾಸಕರು ದೆಹಲಿಯ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದು, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕೂಡ ಒಬ್ಬರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ ರವಿ ಅವರ ದೆಹಲಿ ಕಚೇರಿ ಪೂಜೆಯಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಬಿಜೆಪಿಯ ಹಲವು ಶಾಸಕರು ದೆಹಲಿಗೆ ತೆರಳಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಲಾಬಿ ನಡೆಸಿದ್ದಾರೆ.

ಉಳಿದ ಶಾಸಕರು ಹಾಗೇನೂ ಇಲ್ಲ ಎಂದು ಜಾರಿಕೊಳ್ಳುತ್ತಿದ್ದರೂ, ಶಾಸಕ ಅಪ್ಪಚ್ಚು ರಂಜನ್ ಮಾತ್ರ ಸಚಿವ ಸ್ಥಾನಕ್ಕಾಗಿ ಕೇಂದ್ರ ನಾಯಕರನ್ನು ಭೇಟಿಯಾಗಿದ್ದು ನಿಜ, ನಮಗೂ ಸಚಿವಸ್ಥಾನ ಬೇಕೆಂದು ಕೇಂದ್ರ ನಾಯಕರನ್ನು ಭೇಟಿಯಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.
ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಇದೇ ವೇಳೆ ಸಚಿವ ಸ್ಥಾನ ನೀಡುವಂತೆ ಕೇಂದ್ರ ನಾಯಕರನ್ನು ಭೇಟಿಯಾಗಿದ್ದೇನೆ. ಸ್ವಾಮಿಕಾರ್ಯ, ಸ್ವಕಾರ್ಯ ಎರಡನ್ನೂ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ.

ಮೂಲ ಬಿಜೆಪಿಯ ಶಾಸಕರು ಐದಾರು ಬಾರಿ ಗೆದ್ದವರಿದ್ದೇವೆ. ನಾವು ಯಾವಾಗಲೂ ಸಚಿವ ಸ್ಥಾನಕ್ಕಾಗಿ ಹಾದಿ ರಂಪ ಬೀದಿರಂಪ ಮಾಡದೇ, ಪಕ್ಷಕ್ಕಾಗಿ ನಿಷ್ಠೆಯಿಂದ ಇದ್ದೇವೆ. ಆದರೆ ಹಾದಿರಂಪ ಬೀದಿರಂಪ ಮಾಡಿ ಮತ್ತೆ ಮತ್ತೆ ಸಚಿವರಾದವರೇ ಈ ಬಾರಿಯೂ ಸಚಿವರಾಗಿದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವಸ್ಥಾನ ಕೊಡಲಿ ಎಂಬುದು ನಮ್ಮ ಒತ್ತಾಯ ಎಂದು ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








