ಬೆಂಗಳೂರು: ಹೆಮ್ಮಾರಿ ಕೊರೊನಾ ಅಬ್ಬರ ಹಿನ್ನೆಲೆಯಲ್ಲಿ ಕೆಲ ತಿಂಗಳಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.
ಎರಡು ಹಂತದಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದ್ದು, ಡಿಸೆಂಬರ್ 22 ಹಾಗೂ 27ರಂದು ಚುನಾವಣೆ ನಡೆಯಲಿದೆ.
ರಾಜ್ಯದ 30 ಜಿಲ್ಲೆಗಳ 5762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯಿತಿಗಳ 92121 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆ ಡಿಸೆಂಬರ್22ರಂದು ನಡೆದರೆ, ಎರಡನೇ ಹಂತದ ಮತದಾನ ಡಿಸೆಂಬರ್ 27ರಮದು ನಡೆಯಲಿದೆ. ಡಿಸೆಂಬರ್7ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾದರೆ, ಡಿ.11 ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆಗೆ ಡಿಸೆಂಬರ್ 16 ಕೊನೆ ದಿನವಾಗಿದೆ. ಡಿಸೆಂಬರ್ 30ಕ್ಕೆ ಪಂಚಾಯತಿ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರಗಳ ಬಳಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ತಿಳಿಸಿದ್ದಾರೆ.
ಬೆಳಿಗ್ಗೆ 7ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ಕೊರೊನಾ ಪಾಸಿಟವ್ ಇದ್ದವರಿಗೆ ಮತದಾನ ಮಾಡಲು ಕೊನೆಯ ಒಂದು ಗಂಟೆಯನ್ನು ಅವಕಾಶ ನೀಡುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel