ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ ಒಂದು ತಿಂಗಳು ಆಸ್ಪತ್ರೆಗೆ ಸೇರಿಕೊಂಡು ರೆಸ್ಟ್ ತೆಗೆದುಕೊಳ್ಳಲಿ ಎಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಹೇಳಿಕೆಗೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
`ಆ ವಿಡಿಯೋ’ ವಿಚಾರವಾಗಿ ರಾಜಕೀಯ ಒತ್ತಡಕ್ಕೆ ಎನ್.ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಶನಿವಾರ ಡಿ.ಕೆ ಶಿವಕುಮಾರ್ ಹೇಳಿದ್ದರು. ಇಂದು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಎನ್.ಆರ್ ಸಂತೋಷ್ ಡಿಕೆಶಿ ಹೇಳಿಕೆ ಖಂಡಿಸಿ ಆಸ್ಪತ್ರೆಗೆ ಸೇರಿಕೊಳ್ಳುವುದು ಒಳ್ಳೆಯದು ಎಂದು ಆರೋಪಿಸಿದ್ದರು.

ಎನ್.ಆರ್ ಸಂತೋಷ್ ಹೇಳಿದಂತೆ ಆಗಲಿ ಬಿಡಿ, ಅವ್ನು ಹೇಳ್ದಂಗೆ ಆಸ್ಪತ್ರೆಗೆ ಸೇರಿಕೊಳ್ಳುತ್ತೇನೆ ಎಂದು ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ರಾಜಕೀಯ ಒತ್ತಡ ಇತ್ತು ಎಂದು ಸಂತೋಷ್ ಪತ್ನಿಯೇ ಹೇಳಿದ್ದಾರೆ. ಎನ್.ಆರ್ ಸಂತೋಷ್ ಸಾಮಾನ್ಯ ವ್ಯಕ್ತಿ ಅಲ್ಲ, ಆತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ. ರಾಜಕೀಯ ಒತ್ತಡಕ್ಕೆ ಮಣಿದು ಹೀಗೆ ಹೇಳಿಕೆ ನೀಡುತ್ತಿದ್ದಾನೆ. ಹೀಗೆಯೇ ಹೇಳು ಎಂದು ಸಂತೋಷ್ಗೆ ಒತ್ತಡ ಹೇರಿದ್ದಾರೆ. ಹೀಗಾಗಿ ಎನ್.ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆ ನಡೆಯಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
ಗ್ರಾಪಂ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ
ಗ್ರಾಮ ಪಂಚಾಯತ್ ಚುನಾವಣೆ ನಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯ ಮಾಡಿ ಕೋರ್ಟ್ ಮೊರೆ ಹೋಗಿತ್ತು. ಆ ಪ್ರಕಾರ ಕೋರ್ಟ್ ಆದೇಶದಂತೆ ಚುನಾವಣೆ ಘೋಷಣೆ ಆಗಿದೆ. ಜನರಿಗೆ ಅಧಿಕಾರ ಕೊಡಬೇಕೆಂಬುದು ಕಾಂಗ್ರೆಸ್ನ ಆಶಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷಾತೀತವಾಗಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಬೆಂಗಳೂರು ಮಹಾನಗರ ಪಾಲಿಕೆಗೂ ಚುನಾವಣೆ ನಡೆಸಬೇಕು ಎನ್ನುವುದು ನಮ್ಮ ಆಸೆ. ಬಿಜೆಪಿ ಆಡಳಿತದಲ್ಲಿರುವ ಬೇರೆ ಬೇರೆ ರಾಜ್ಯಗಳು ತೆಗೆದುಕೊಳ್ಳುವ ನಿರ್ಣಯಗಳು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಿ, ರಾಜ್ಯದಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸುವುದು ಹಾಗೂ ಪಕ್ಷ ಸಂಘಟನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹಿರಿಯ ನಾಯಕರ ಜತೆ ಚರ್ಚೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಡಿಕೆಶಿ ಒಬ್ಬರೇ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ನನಗೆ ಸಾಮೂಹಿಕ ನಾಯಕತ್ವದ ಬಗ್ಗೆ ನಂಬಿಕೆ ಇದೆ. ಹೀಗಾಗಿ ಎಲ್ಲಾ ಹಿರಿಯ ನಾಯಕರ ಅಭಿಪ್ರಾಯ ಪಡೆದು ಪಕ್ಷ ಸಂಘಟನೆ ಹಾಗೂ ಮುಂದಿನ ಕಾರ್ಯತಂತ್ರ ರಚಿಸಲಾಗುವುದು ಎಂದರು.
ಬಿಜೆಪಿಯವರು ಇರೋದೆ ಸಂವಿಧಾನ ಸುಡಲು..!
ಬೆಳಗಾವಿಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮುಸ್ಲಿಮರಿಗೆ ಟಿಕೆಟ್ ನೀಡಲ್ಲ ಎನ್ನುವುದು ಬಿಜೆಪಿಯ ತತ್ವ(ಪ್ರಿನ್ಸಿಪಲ್). ಬಿಜೆಪಿಯವರು ಸಂವಿಧಾನವನ್ನೇ ಸುಟ್ಟುಬಿಡಲಿ ಬಿಡಿ. ಬಿಜೆಪಿಯವರು ಇರೋದೆ ಸಂವಿಧಾನವನ್ನು ಸುಡಲು ಅಲ್ಲವೇ, ಸಂವಿಧಾನದಲ್ಲಿ ಏನಿದೆ ಎಂದು ಈಶ್ವರಪ್ಪ ಅವರಿಗೆ ನೀವೆಲ್ಲ ಸೇರಿ ಓದಿಸಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಲಹೆ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








