ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿವರಾಗಲು ಅನರ್ಹ, `ಹಳ್ಳಿಹಕ್ಕಿ’ಗೆ ಹೈಕೋರ್ಟ್ ಬಿಗ್ ಶಾಕ್: ಎಂಟಿಬಿ, ಶಂಕರ್‍ ಗೆ ರಿಲೀಫ್..!

Kariyappa N by Kariyappa N
November 30, 2020
in Newsbeat, Politics, Samagra karnataka, ರಾಜ್ಯ
disqualification
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಲು ತೀವ್ರ ಕಸರತ್ತು ನಡೆಸಿದ್ದ ಹಳ್ಳಿಹಕ್ಕಿ ಖ್ಯಾತಿಯ ಮಾಜಿ ಸಚಿವ ಹೆಚ್.ವಿಶ್ವನಾಥ್‍ಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.


ಸಂವಿಧಾನಬದ್ಧವಾಗಿ ಹೆಚ್.ವಿಶ್ವನಾಥ್ ಆಯ್ಕೆಯಾಗದ ಹಿನ್ನೆಲೆಯಲ್ಲಿ ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಆದರೆ, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್‍ ಗೆ ಹೈಕೋರ್ಟ್ ರಿಲೀಫ್ ಕೊಟ್ಟಿದೆ.

Related posts

upes-google-cloud-partnership-ai-education-gemini-day-10100-licenses

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

September 2, 2026
swiggy-hero-motocorp-delivery-partners-bike-scooter-loan-road-safety-training

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

September 2, 2026

ಏನಿದು ಪ್ರಕರಣ…?
ಕಾಂಗ್ರೆಸ್, ಜೆಡಿಎಸ್‍ನಿಂದ ಶಾಸಕರಾಗಿ ಆಯ್ಕೆಯಾಗಿ ಆಪರೇಷನ್ ಕಮಲಕ್ಕೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಸೇರಿದಂತೆ 17 ಶಾಸಕರನ್ನು ಹಿಂದಿನ ಸ್ಪೀಕರ್ ರಮೇಶ್ ಕುಮಾರ್ 2023ರವರೆಗೆ ಅನರ್ಹಗೊಳಿಸಿದ್ದರು. ಸುಪ್ರೀಂಕೋರ್ಟ್ ಕೂಡ ಶಾಸಕರ ಆನರ್ಹತೆ ಆದೇಶ ಎತ್ತಿ ಹಿಡಿದಿತ್ತು. ಇವರು ಮತ್ತೆ ಸಚಿವ ಸಂಪುಟ ಸೇರಬೇಕಾದರೆ ಸಂವಿಧಾನಬದ್ಧವಾಗಿ ಚುನಾವಣೆಯಲ್ಲಿ ಆಯ್ಕೆಯಾಗಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಸೋಲು ಅನುಭವಿಸಿದ್ದರು. ಆರ್.ಶಂಕರ್ ಚುನಾವಣೆಗೆ ಸ್ಪರ್ಧೆ ಮಾಡಿರಲಿಲ್ಲ. ಹೀಗಾಗಿ ಸಚಿವ ಸ್ಥಾನ ಪಡೆಯಬೇಕಾದರೆ ವಿಧಾನಪರಿಷತ್‍ಗೆ ಆಯ್ಕೆಯಾಗಬೇಕಿತ್ತು.


ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಆದರೆ, ವಿಶ್ವನಾಥ್‍ಗೆ ಟಿಕೆಟ್ ಸಿಗದ ಕಾರಣ ಸಾಹಿತ್ಯ ಕೋಟಾದಲ್ಲಿ ನೇರವಾಗಿ ವಿಧಾನಪರಿಷತ್‍ಗೆ ನಾಮಕರಣ ಮಾಡಲಾಗಿತ್ತು.
ಹೆಚ್.ವಿಶ್ವನಾಥ್, ಆರ್.ಶಂಕರ್, ಎಂಟಿಬಿ ನಾಗರಾಜ್‍ರ ಅನರ್ಹತೆಯನ್ನು ಪರಿಗಣಿಸಿ ಸಚಿವ ಸ್ಥಾನ ಪಡೆಯದಂತೆ ಆದೇಶ ನೀಡಬೇಕು ಎಂದು ವಕೀಲರಾದ ಎ.ಎಸ್ ಹರೀಶ್, ಜಿ.ಮೋಹನ್ ಕುಮಾರ್ ಹೈಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಓಕಾ, ನ್ಯಾ.ವಿಶ್ವಜಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಹೆಚ್.ವಿಶ್ವನಾಥ್ ಸಾಂವಿಧಾನಿಕ ಚುನಾವಣೆ ಮೂಲಕ ವಿಧಾನಪರಿಷತ್‍ಗೆ ಆಯ್ಕೆಯಾಗಿಲ್ಲ. ನಾಮನಿರ್ದೇಶನದ ಮೂಲಕ ವಿಧಾನಪರಿಷತ್‍ಗೆ ನೇಮಕಗೊಂಡಿದ್ದಾರೆ. ಹೀಗಾಗಿ 2021ರವರೆಗೆ ಸಂವಿಧಾನದ ಕಲಂ 164(1ಬಿ), 361ಬಿ ಅಡಿ ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರು. ಮುಖ್ಯಮಂತ್ರಿಗಳು ವಿಶ್ವನಾಥ್‍ರ ಅನರ್ಹತೆ ಪರಿಗಣಿಸಬೇಕು ಎಂದು ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.


ಆದರೆ, ವಿಧಾನಸಭೆಯಿಂದ ನಡೆದ ಚುನಾವಣೆ ಮೂಲಕ ಎಂಟಿಬಿ ನಾಗರಾಜ್, ಆರ್.ಶಂಕರ್ ಆಯ್ಕೆಯಾಗಿರುವುದರಿಂದ ಇಬ್ಬರೂ ಸಚಿವರಾಗಲು ಅಡ್ಡಿ ಇಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಸಚಿವರಾಗಬೇಕೆಂದು ಕಳೆದ ಒಂದು ವರ್ಷದಿಂದ ಹಪಹಪಿಸುತ್ತಿದ್ದ ಹೆಚ್.ವಿಶ್ವನಾಥ್‍ರ ಕನಸಿಗೆ ಹೈಕೋರ್ಟ್ ಕೊಳ್ಳಿ ಇಟ್ಟಿದೆ ಎಂದರೆ ತಪ್ಪಾಗಲಾರದು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BS Yeddyurappacabinet birthdisqualificationh.viswanathHigh Court Big ShockMTB NagarajR Shankar
ShareTweetSendShare
Join us on:

Related Posts

upes-google-cloud-partnership-ai-education-gemini-day-10100-licenses

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 2, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ ಅಂಗವಾಗಿ...

swiggy-hero-motocorp-delivery-partners-bike-scooter-loan-road-safety-training

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by admin
September 2, 2026
0

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

jiopc-old-laptop-desktop-16gb-ram-1tb-storage-cloud-computing

ಹಳೆಯ ಲ್ಯಾಪ್ ಟಾಪ್ ಮತ್ತು ಡೆಸ್ಕ್ ಟಾಪ್ ಇನ್ನಷ್ಟು ಶಕ್ತಿಶಾಲಿಯಾಗಲಿವೆ: ಜಿಯೋಪಿಸಿ ನೀಡುತ್ತಿದೆ 16 ಜಿಬಿ RAM ಮತ್ತು 1 TB ವರೆಗೆ ಸಂಗ್ರಹಣೆ

by admin
September 2, 2026
0

ನವದೆಹಲಿ,  2026: ಹಳೆಯ ಲ್ಯಾಪ್ ಟಾಪ್ ಅಥವಾ ಡೆಸ್ಕ್ ಟಾಪ್ ನಿಧಾನವಾಗಿದ್ದರೆ, ತಕ್ಷಣ ಹೊಸದನ್ನು ಖರೀದಿಸುವ ಅಗತ್ಯವಿಲ್ಲ. ರಿಲಯನ್ಸ್ ಜಿಯೋಪಿಸಿ (JioPC) ನಿಮ್ಮ ಹಳೆಯ ಕಂಪ್ಯೂಟರ್ ಅನ್ನು...

thuluva-mahasabha-international-bengaluru-new-leadership-purushothama-chendla

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯ ಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ • ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ • ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್

by admin
September 2, 2026
0

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯ ಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ • ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ • ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್...

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram