ಬೆಂಗಳೂರು: ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಮ್ಮತಿಸಿದ್ದಾರೆ.

ಕೋವಿಡ್ ಹಾಗೂ ಲಾಕ್ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದರು. ಈ ಸಂಬಂಧ ಸಚಿವ ರಮೇಶ್ ಜಾರಕಿಹೊಳಿ ನೀಡಿದ ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ.40ರಷ್ಟು ರಾಜ್ಯ ಸರ್ಕಾರದ ಪಾಲಿನ ಅನುದಾನಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








