ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ್ ಬಂದ್ | ರಾಜಧಾನಿ ಬೆಂಗಳೂರಲ್ಲಿ ನೀರಸ, ಕೆಲ ಜಿಲ್ಲೆಗಳಿಗೆ ತಟ್ಟಿದ ಬಂದ್ ಬಿಸಿ..!

Kariyappa N by Kariyappa N
December 8, 2020
in Newsbeat, Politics, Samagra karnataka, ರಾಜ್ಯ
bharath nund
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿ ಏನೇನಿದೆ, ಏನೇನಿಲ್ಲ…!
ಬಿಎಂಟಿಸಿ ಬಸ್, ಮೆಟ್ರೋ, ಕೆಎಸ್‍ಆರ್‍ಟಿಸಿ ಬಸ್ ಸಂಚಾರ- ಇದೆ
ಆಟೋ, ಓಲಾ-ಉಬರ್ ಕ್ಯಾಬ್ ಸಂಚಾರ- ಇದೆ
ಹೋಟೆಲ್, ಅಂಗಡಿ-ಮುಂಗಟ್ಟು, ದಿನಸಿ ಅಂಗಡಿ- ಓಪನ್
ಮೆಡಿಕಲ್ ಶಾಪ್, ಆಸ್ಪತ್ರೆಗಳು, ಬಾರ್, ಥಿಯೇಟರ್- ಓಪನ್
ಮಾಲ್‍ಗಳು ಹಾಗೂ ತರಕಾರಿ ಮಾರುಕಟ್ಟೆ- ಇದೆ

ಬೆಂಗಳೂರು: ಅನ್ನದಾತನ ವಿರೋಧಿ ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ರಾಜಧಾನಿ ಬೆಂಗಳೂರು ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲ ಜಿಲ್ಲೆಗಳಲ್ಲಿ ವಾಹನ ಸಂಚಾರ್ ಬಂದ್ ಆಗಿದ್ದು, ಬೆಳ್ಳಂಬೆಳಿಗ್ಗೆಯೇ ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ಹೀಗಾಗಿ ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್‍ನ ಬಿಸಿ ತಟ್ಟಿದೆ.

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

bund
ಕರ್ನಾಟಕ ಬಂದ್ ಆಗಿ ಕೇವಲ 3 ದಿನಗಳ ನಂತರ ಭಾರತ್ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಜನರಿಂದ ಯಾವುದೇ ಬೆಂಬಲ ಸಿಕ್ಕಿಲ್ಲ. ಬಿಎಂಟಿಸಿ, ಮೆಟ್ರೋ ಸಂಚಾರ ಎಂದಿನಂತೆ ಸಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ.
ಆಟೋಗಳು ರಸ್ತೆಗಿಳಿದಿದ್ದು, ಓಲಾ-ಉಬರ್ ಕ್ಯಾಬ್‍ಗಳು ಸಹ ಓಡಾಡುತ್ತಿವೆ. ಹೋಟೆಲ್, ಅಂಗಡಿ-ಮುಂಗಟ್ಟು, ದಿನಸಿ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆಗಳು, ಬಾರ್, ಥಿಯೇಟರ್, ಮಾಲ್‍ಗಳು ಹಾಗೂ ತರಕಾರಿ ಮಾರುಕಟ್ಟೆಗಳು ಸಹ ಎಂದಿನಂತೆ ಓಪನ್ ಆಗಿದ್ದು, ಬಂದ್‍ನ ಯಾವುದೇ ವಾತಾವರಣ ಕಂಡು ಬರುತ್ತಿಲ್ಲ.
ನಗರದಲ್ಲಿ ಕಳೆದ ರಾತ್ರಿಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿರುವ ಕಾರಣ ಜನರು ಮನೆಗಳಿಂದ ಹೊರ ಬಂದಿಲ್ಲ. ಹೀಗಾಗಿ ಬಿಎಂಟಿಸಿ ಬಸ್‍ಗಳು ಜನರಿಲ್ಲದೆ ಖಾಲಿ ಓಡಾಡುತ್ತಿವೆ.
ಬೆಳಿಗ್ಗೆ 11 ಗಂಟೆ ನಂತರ ರೈತ ಸಂಘಟನೆಗಳು ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿ ವಿಧಾನಸೌಧ ಚಲೋ ನಡೆಸಲು ತೀರ್ಮಾನಿಸಿದ್ದು, ವಾಟಾಳ್, ಕರವೇ ಸೇರಿದಂತೆ ಕನ್ನಡಪರ ಸಂಘಟನೆಗಳು ಟೌನ್‍ಹಾಲ್ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು ಭಾರತ್ ಬಂದ್ ಬೆಂಬಲಿಸಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ
ಭಾರತ್ ಬಂದ್ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ್ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತ್ ಬಂದ್ ಬೆಂಬಲಿಸಿ ರೈತ ಹೊರಾಟಗಾರರು ಬೈಕ್ ರ್ಯಾಲಿ ಮಾಡಿ ಬಸ್ ಸಂಚಾರ ತಡೆಯಲು ಯತ್ನಿಸಿದ್ದಾರೆ. ಹುಬ್ಬಳ್ಳಿಯ ಹೊಸೂರು depo ಬಳಿ ಧರಣಿ ನಡೆಸುತ್ತಿದ್ದ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಬಸ್ ತಡೆದ ರೈತ ಹೊರಾಟಗಾರರಿಗೆ ಡಿಸಿಪಿ ಬಸರಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ಕೈ ಬಿಡದಿದ್ದರೆ ಪ್ರತಿಭಟನಾಕಾರರನ್ನು ಬಂಧಿಸುವುದಾಗಿ ಎಚ್ಚರಿಕೆ ನೀಡುತ್ತಿದ್ದಂತೆ ಹೋರಾಟಗಾರರು ಹಾಗೂ ಡಿಸಿಪಿ ನಡುವೆ ವಾಗ್ವಾದ ನಡೆದಿದೆ.


ಭಾರತ್ ಬಂದ್ ಹಿನ್ನೆಲೆ ಕೊಪ್ಪಳದಲ್ಲಿ ರಾಜ್ಯ ರೈತರ ಹಿತರಕ್ಷಣಾ ವೇದಿಕೆ, ಕೃಷಿ ಹಾಗೂ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣದ ಮುಂದೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಧಾನಿ ಮೋದಿ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಮಾಡಿದ್ದಾರೆ. ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಭಾರತ್ ಬಂದ್ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ. ಬಿಎಸ್ಪಿ, ಸಿಪಿಐಎಂಎಲ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: bangalorebharath bunddistricts effectFarmers protestno effect
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram