ಬೆಂಗಳೂರು: ಕಿಡ್ನಾಪ್‍ಗೆ ಒಳಗಾಗಿ ಸುದ್ದಿಯಾಗಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ವರ್ತೂರು ಪ್ರಕಾಶ್ ನನ್ನನ್ನು ಭೇಟಿ ಮಾಡಿಲ್ಲ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಯಾವುದೇ ಆಲೋಚನೆಯೂ ಇಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.
ವರ್ತೂರು ಪ್ರಕಾಶ್ ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ `ನಮ್ಮ ಕಾಂಗ್ರೆಸ್ ಪಕ್ಷ’ ಪಕ್ಷ ಸ್ಥಾಪಿಸಿ ಕೋಲಾರದಿಂದ ಸ್ಪರ್ಧಿಸಿ ಸೋತಿದ್ದ ವರ್ತೂರು ಪ್ರಕಾಶ್, ಮತ್ತೆ ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳಿಕೆ ನೀಡಿದ್ದಾರೆ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಟೀಕಿಸುತ್ತಿದ್ದ ವರ್ತೂರು ಪ್ರಕಾಶ್, ಕೈಕಾಲು ಹಿಡಿದಾದರೂ ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನ ಮಾಡುವುದಾಗಿ ಹೇಳಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel