ಬಾಲಿವುಡ್ ಡ್ರಗ್ಸ್ ಪ್ರಕರಣ: ರಿಯಾಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದವ ಅರೆಸ್ಟ್..!
ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿದ್ದ ಸುಶಾಂತ್ ಪ್ರೇಯಸಿ ರಿಯಾ ಚಕ್ರಬೊರ್ತಿಗೆ ಡ್ರಗ್ಸ್ ಪೂರೈಕೆ ಮಾಡ್ತಿದ್ದ ಪೆಡ್ಲರ್ ಅರೆಸ್ಟ್ ಆಗಿದ್ದಾನೆ. ಬಂಧಿತ ರಗೆಲ್ ಮಹಕಲ್ ಇಷ್ಟುದಿನಗಳ ಕಾಲ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮುಂಬೈನ ಪಶ್ಚಿಮ ಉಪನಗರದಲ್ಲಿ ಎನ್ ಸಿಬಿ ಅಧಿಕಾರಿಗಳು ಆತನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಮೆಗಾಸ್ಟಾರ್ ಕುಟುಂಬದಲ್ಲಿ ಸಡಗರ ಸಂಭ್ರಮ : ನಿಹಾರಿಕಾ ದುಬಾರಿ ಗಿಫ್ಟ್ ಕೊಟ್ಟ ಚಿರಂಜೀವಿ!
ರಗೆಲ್ ಮಹಕಲ್ ಪ್ರಮುಖ ಡ್ರಗ್ ಪೆಡ್ಲರ್ ಎನ್ನಲಾಗಿದೆ. ರಗೆಲ್ ಮಹಕಲ್ ಕೇಶ್ವಾನಿಗೆ ಡ್ರಗ್ಸ್ ಪೂರೈಸುತ್ತಿದ್ದ, ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ ಹಸ್ತಾಂತರಿಸುತ್ತಿದ್ದನು. ಕೈಜಾನ್ ಎಂಬಾತ ಅದನ್ನು ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್‌ಗೆ ನೀಡ್ತಿದ್ದ ಎಂದು ತಿಳಿದು ಬಂದಿದೆ. ಇದೀಗ ಆತನನ್ನ ಎನ್ ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಮತ್ತಷ್ಟು ಜನರ ಹೆಸರು ಈ ಪ್ರಕರಣದಲ್ಲಿ ಖುಲಾಸೆಯಾಗುವ ಸಾಧ್ಯತೆಯಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel