ರಾಮನಗರ: ಬೀಗರ ಔತಣಕೂಟದಲ್ಲಿ ಊಟ ಮಾಡಿದವರಿಗೆ 300ಕ್ಕೂ ಹೆಚ್ಚು ಮಂದಿ ವಾಂತಿಭೇದಿಯಿಂದ ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಕಳೆದ ಭಾನುವಾರ ಮದುವೆ ಕಾರ್ಯಕ್ರಮ ನಡೆದಿತ್ತು. ಮಂಗಳವಾರ ಯುವತಿ ಮನೆಯವರಿಂದ ಬೀಗರ ಔತಣಕೂಟ ಆಯೋಜನೆ ಮಾಡಲಾಗಿತ್ತು. ಔತಣಕೂಟದಲ್ಲಿ ಸುಮಾರು 700 ರಿಂದ 800 ಜನರು ಊಟ ಮಾಡಿದ್ದರು. ಇವರ ಪೈಕಿ 250ರಿಂದ 300 ಜನರಿಗೆ ಊಟ ಮಾಡಿದ ನಂತರ ವಾಂತಿಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅಸ್ವಸ್ಥರನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆಲವರಿಗೆ ಮೊಳೆದೊಡ್ಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದರು. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








