ಗೋ ಹತ್ಯೆ ನಿಷೇಧ ಮಸೂದೆ ವಿಧೇಯಕದ ಪ್ರಮುಖ ಅಂಶಗಳೇನು..?
ವಿವಾದಿತ ಗೋಹತ್ಯೆ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಮಂಡಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆಯ ನಡುವೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದಾರೆ.
ಗೋಹತ್ಯೆ ನಿಷೇಧ ಮಸೂದೆ ಬಗ್ಗೆ ಸದ್ಯ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಮಸೂದೆ ಪರ ಕೆಲವರು ಬ್ಯಾಟ್ ಬೀಸುತ್ತಿದ್ದರೇ ಇನ್ನೂ ಕೆಲವರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಹಾಗಾದ್ರೆ ವಿಧೇಯಕದ ಪ್ರಮುಖ ಅಂಶಗಳೇನು..? ಅನ್ನೋದನ್ನ ನೋಡೋದಾದ್ರೆ
ಈ ವಿಧೇಯಕದ ಪ್ರಕಾರ ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣಗಳ ಹತ್ಯೆ ನಿಷೇಧ. ನಿಯಮವನ್ನು ಉಲ್ಲಂಘಿಸಿದ್ರೆ 3ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಜೊತೆಗೆ ಪ್ರತಿ ಗೋ ಹತ್ಯೆಗೆ 50,000ರಿಂದ ಗರಿಷ್ಠ ಐದು ಲಕ್ಷ ರೂ. ದಂಡ ಕಟ್ಟಬೇಕಾಗುತ್ತೆ.
ಇನ್ನು ಅಪರಾಧ ಪುನರಾವರ್ತಿತವಾದ್ರೆ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಗೋ ಹತ್ಯೆ ಮಾಡುವವರಿಗೆ ನಿರ್ದಿಷ್ಟ ಅವಧಿವರೆಗೆ ಜಾಮೀನು ಸಿಗೋದಿಲ್ಲ.
ಗೋ ಹತ್ಯೆ ಉದ್ದೇಶಕ್ಕಾಗಿ ಅಂತಾರಾಜ್ಯ ಹಾಗೂ ರಾಜ್ಯದೊಳಗಡೆ ಗೋ ಸಾಗಾಟ ನಿಷೇಧ. ಒಂದು ವೇಳೆ ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋ ಸಾಗಾಟ ಮಾಡಬೇಕಾದ್ರೆ ಅದಕ್ಕೆ ಅಧಿಕಾರಿಗಳ ಅನುಮತಿ ಪಡೆಯಲೇಬೇಕು.
ಅದೂ ಕೂಡ ಕೇಂದ್ರ ಸರ್ಕಾರ ಸೂಚಿಸುವ ನಿಯಮಗಳ ಪ್ರಕಾರ ಗೋ ಸಾಗಾಟ ಮಾಡಬೇಕಾಗುತ್ತದೆ.
ಇನ್ನು ನಿಯಮಗಳನ್ನು ಉಲ್ಲಂಘಿಸಿ ಗೋವುಗಳನ್ನು ಸಾಗಾಟ ಮಾಡಿದರೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗುತ್ತದೆ.
ಎಸ್ ಐ ಶ್ರೇಣಿ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ತಪಾಸಣೆ ಹಾಗೂ ಮುಟ್ಟುಗೋಲು ಮಾಡಲು ಅಧಿಕಾರ ನೀಡಲಾಗಿದೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ
ಗೋಹತ್ಯೆಗೆ ಸಂಬಂಧಿಸಿದಂತೆ ಸಾಗಾಟ ಮಾಡಿದ ವಾಹನಗಳು ಹಾಗೂ ಇತರ ಸಲಕರಣೆಗಳನ್ನು ಆರೋಪಿಗೆ ಹಿಂದುರುಗಿಸಲು ಬ್ಯಾಂಕ್ ಗ್ಯಾರಂಟಿ ನೀಡುವುದು ಅಗತ್ಯ. ಗೋಹತ್ಯೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚನೆ ಮಾಡಬಹುದು.
ಮಸೂದೆಯಲ್ಲಿ ಕೆಲವೊಂದಕ್ಕೆ ವಿನಾಯಿತಿ ನೀಡಲಾಗಿದ್ದು, ಅವು ಹೀಗಿವೆ.
ಸಂಶೋಧನಾ ಉದ್ದೇಶಕ್ಕಾಗಿ ಬಳಸುವ ಗೋವುಗಳಿಗೆ ಈ ಕಾನೂನಿನಿಂದ ವಿನಾಯಿತಿಲಾಗಿದೆ.
ಪಶು ವೈದ್ಯಾಧಿಕಾರಿಗಳು ದೃಢೀಕರಿಸಿದ ರೋಗಗಳಿಂದ ಬಳಲುತ್ತಿರುವ ಗೋವುಗಳ ಹತ್ಯೆಗೆ ಅವಕಾಶ ಮಾಡಿಕೊಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









