ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೋಹತ್ಯೆ ನಿಷೇಧ ಕಾಯ್ದೆಯ ಪರಾಮರ್ಶೆ ಆಗಲಿ: ಬಿಜೆಪಿ, ಕಾಂಗ್ರೆಸ್‍ಗೆ ಸರಣಿ ಪ್ರಶ್ನೆ ಹಾಕಿದ ಎಚ್‍ಡಿಕೆ

Kariyappa N by Kariyappa N
December 10, 2020
in Newsbeat, Politics, Samagra karnataka, ರಾಜ್ಯ
cow bill
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್‍ನ ತೀವ್ರ ವಿರೋಧದ ನಡುವೆಯೂ ರಾಜ್ಯ ಬಿಜೆಪಿ ಸರ್ಕಾರ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದುಕೊಂಡಿದೆ.


ತರಾತುರಿಯಲ್ಲಿ ಸದನ ಸಲಹಾ ಸಮಿತಿ ಗಮನಕ್ಕೂ ತಾರದೇ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ಗುರುವಾರ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದೆ. ಆದರೆ, ಗೋಹತ್ಯೆ ಕಾಯ್ದೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್‍ಗೆ ಸರಣಿ ಟ್ವೀಟ್‍ಗಳ ಮೂಲಕ ಹಲವು ಪ್ರಶ್ನೆಗಳನ್ನು ಹಾಕಿ ಸವಾಲು ಎಸೆದಿದ್ದಾರೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

 

ಹೆಚ್‍ಡಿಕೆ ಸರಣಿ ಪ್ರಶ್ನೆಗಳು ಇಂತಿವೆ..
1. ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‍ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ವಿಚಾರವಾಗಿ ಇರುವ ಅನುಮಾನ, ಆತಂಕಗಳನ್ನು ಜೆಡಿಎಸ್ ನಿಷ್ಪಕ್ಷಪಾತವಾಗಿ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ, ರೈತ ಪ್ರತಿನಿಧಿಯಾಗಿ ಕೆಲಸ ಮಾಡಲಿಚ್ಚಿಸುತ್ತದೆ.

2. ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‍ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ.

3. ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು.

4. ರೈತ ತಾನು ಪೂಜಿಸುವ, ಪೋಷಿಸುವ ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ.

5. ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು.

6. ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೆÇೀಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.

7. ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೆ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?

8. ಪೆÇಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?

9. ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?

10. ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಈ ನಿಯಮಗಳು ರೈತ ಸರ್ಕಾರ ಕಚೇರಿಗಳಿಗೆ ಅಲೆಯುವಂತೆ ಮಾಡುವುದರಲ್ಲಿ ಅನುಮಾನವಿಲ್ಲ. ಕೊನೆಗೆ ಇದು ಹೈನುಗಾರಿಕೆಗೆ ಪೆಟ್ಟು ಕೊಡುತ್ತದೆ.

11. ಗೋಹತ್ಯೆ ನಿಷೇಧ ಕಾಯ್ದೆಯು ಗೋವಿನ ಹತ್ಯೆಯನ್ನು ತಡೆಯುವ ಸ್ವರೂಪದ್ದಾಗಿದೆಯಾದರೂ, ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಸಾಕಷ್ಟು ಸನ್ನಿವೇಶಗಳನ್ನೂ ಬಲವಂತವಾಗಿ ಸೃಷ್ಟಿ ಮಾಡುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಲೇಬೇಕು. ಇದಕ್ಕೆ ಸರ್ಕಾರ ಸೂಕ್ತ ಪರಿಹಾರ, ಮಾರ್ಗೋಪಾಯಗಳನ್ನು ಸೂಚಿಸಬೇಕು. ಇಲ್ಲವಾದರೆ, ಇದು ರೈತ ವಿರೋಧಿಯಾಗಲಿದೆ.

12. ಗೋವುಗಳು ಹೇಗೆ ನಮಗೆ ಪೂಜನೀಯವೋ, ರೈತನೂ ಪೂಜನೀಯವೇ. ಗೋ ಹತ್ಯೆಯನ್ನು ತಡೆಯುವ ನಮ್ಮ ಪ್ರಯತ್ನದಲ್ಲಿ ರೈತನನ್ನು ಶೋಷಿಸುವ ವ್ಯವಸ್ಥೆಗೆ ದೂಡುವುದು ಯಾವ ನ್ಯಾಯ? ಕಾಯ್ದೆಯು ರೈತನ್ನು ಸಂಕಷ್ಟಕ್ಕೆ ದೂಡಬಾರದು ಎಂಬುದಷ್ಟೇ ನನ್ನ ಆಶಯ. ಜೆಡಿಎಸ್‍ಗೆ ಈ ವಿಚಾರದಲ್ಲಿ ಯಾವ ಮತಬ್ಯಾಂಕ್‍ನ ಓಲೈಕೆಯೂ ಬೇಕಿಲ್ಲ. ರೈತನ ಹಿತ ರಕ್ಷಣೆಯಾದರೆ ಸಾಕು.

13. ರೈತ ತಾನು ಪೋಷಿಸಿದ ಗೋವನ್ನು ಅಥವಾ ಯಾವುದೇ ಪ್ರಾಣಿಯನ್ನು ವಧೆಗಾಗಿ ಕೊಡಲು ಮನಃಪೂರ್ವಕವಾಗಿ ಒಪ್ಪಲಾರ. ಆದರೆ, ಅದು ಅವನಿಗೆ ಅನಿವಾರ್ಯ. ಗೋಹತ್ಯೆಯನ್ನು ನಿಷೇಧಿಸಬೇಕಿದ್ದರೆ, ಆತನ ಅನಿವಾರ್ಯತೆಯನ್ನು ನಾವು ಹೋಗಲಾಡಿಸಬೇಕು. ರೈತನಿಗೆ ಹೊರೆ ಸೃಷ್ಟಿಸುವ ಜಾನುವಾರುಗಳ ರಕ್ಷಣೆಯನ್ನು ಸರ್ಕಾರವೇ ಮಾಡಲಿ. ಗೋವಿನ ಜೊತೆಗೆ ರೈತನನ್ನೂ ರಕ್ಷಿಸಲಿ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongresscow slaughter billFarmersh.d.kumaraswamiJDS
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram