ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ 31 ಡಿಸೆಂಬರ್ 2020ರ ವರೆಗೆ ವಿಸ್ತರಣೆ
ಬೆಂಗಳೂರು, ಡಿಸೆಂಬರ್10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬಸ್ ಉಚಿತ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯು ದಿನಾಂಕ 10-12-2020ಕ್ಕೆ ಮುಕ್ತಾಯಗೊಂಡಿದೆ. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 31-12-2020ರವರೆಗೆ ಅವಕಾಶ ನೀಡಿ ಕೆಎಸ್ ಆರ್ ಟಿ ಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ರಾಜ್ಯದ ವಿಶ್ವವಿದ್ಯಾಲಯಗಳು/ ಖಾಸಗಿ ವಿಶ್ವವಿದ್ಯಾಲಯ/ ಪದವಿ/ ಸ್ನಾತಕೋತ್ತರ/ ಡಿಪ್ಲೊಮಾ/ ತಾಂತ್ರಿಕ/ ವೈದ್ಯಕೀಯ ಕಾಲೇಜು/ ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಚಟುವಟಿಕೆಗಳನ್ನು ದಿನಾಂಕ 17-11-2020ರಿಂದ ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಸೂಚಿಸಿದ್ದರಿಂದ, ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 10-12-2020ರ ಇಂದಿನ ವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಭಾರತದ ಡಿಜಿಟಲ್ ಆರ್ಥಿಕ ನೀತಿಗಳನ್ನು ಶ್ಲಾಘಿಸಿದ ಬಿಲ್ ಗೇಟ್ಸ್
ಮುಂದುವರೆದು, ಕ.ರಾ.ರ.ಸಾ ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ/ ಸ್ನಾತಕೋತ್ತರ/ಡಿಪ್ಲೋಮಾ/ ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ 31-12-2020ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ.

ಅದರನ್ವಯ ಮೇಲ್ಕಂಡ ವರ್ಗದ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಸದರಿ ಅವಕಾಶವನ್ನು ಸದಪಯೋಗಪಡಿಸುವುದು ಎಂಬುದಾಗಿ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1336718546223521793?s=19
https://twitter.com/SaakshaTv/status/1336719176694546433?s=19








