ಸಾಂಗ್ಲಿ : ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ಕಿಲ್ಲರ್ ಕೊರೊನಾ ಸೋಂಕು ದೇಶದಲ್ಲಿ ಹರಡುತ್ತಲೇ ಇದೆ. ದಿನೇ ದಿನೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ
ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಏತನ್ಮಧ್ಯೆ, ಇದೀಗ ಮಹಾರಾಷ್ಟ್ರದಲ್ಲಿ ಒಂದೇ ಕುಟುಂಬದ 12 ಮಂದಿಯಲ್ಲಿ ಮಾರಕ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಂಗ್ಲಿ ಜಿಲ್ಲೆಯ ಕುಟುಂಬವೊಂದರ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ಸಂಬಂಧಿಕರು ಆಗಮಿಸಿದ್ದರು. ಆರಂಭದಲ್ಲಿ ಕುಟುಂಬದ ಎಲ್ಲರಲ್ಲೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದವು. ಈಗಾಗಿ ಅವರೆಲ್ಲರನ್ನು ಪ್ರತ್ಯೇಕವಾಗಿರಿಸಲಾಗಿತ್ತು. ಎಲ್ಲರ ರಕ್ತದ ಮಾದರಿ ಹಾಗೂ ಗಂಟಲು ದ್ರವದ ಸ್ಯಾಂಪಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು, 12 ಮಂದಿಯಲ್ಲೂ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.








