ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಕೆಎಸ್‍ಆರ್‍ಟಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದಿದ್ದು, ನಾಳೆಯೂ ಬಸ್‍ಗಳು ರಸ್ತೆಗಿಳಿಯುವುದು ಅನುಮಾನ. ಹೀಗಾಗಿ ರಸ್ತೆಗಿಳಿಯುವ ಮುನ್ನ ಹಲವು ಬಾರಿ ಯೋಚನೆ ಮಾಡಿ ಹೊರಡುವುದು ಸೂಕ್ತವಾಗಿದೆ.
ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸಾರಿಗೆ ನೌಕರರ ಸಂಘಟನೆಗಳ ಜತೆ ನಡೆಸಿದ ಸಭೆ ಯಾವುದೇ ನಿರ್ಣಯಕ್ಕೆ ಬರಲು ವಿಫಲವಾಗಿದೆ. ಹೀಗಾಗಿ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಮುಂದುವರೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.
ಲಕ್ಷ್ಮಣ್ ಸವದಿ ಜತೆ ಸಭೆ ಬಳಿಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಸಭೆಯಲ್ಲಿ ಮುಷ್ಕರ ಮುಂದುವರೆಸಿ ನಾಳೆಯೂ ಬಸ್‍ಗಳನ್ನು ಓಡಿಸದೇ ಇರಲು ತೀರ್ಮಾನಕ್ಕೆ ಬರಲಾಗಿದೆ.
ಸರ್ಕಾರದ ತೀರ್ಮಾನಕ್ಕಾಗಿ ಕಾಯತ್ತೇವೆ, ಯಾವ ಕ್ಷಣದಲ್ಲಾದರೂ ಮುಷ್ಕರ ವಾಪಸ್ ತೆಗೆದುಕೊಳ್ಳಲು ಸಿದ್ಧರಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದರೆ ತಕ್ಷಣವೇ ಮುಷ್ಕರ ಕೈಬಿಡುತ್ತೇವೆ. ಅಲ್ಲಿಯವರೆಗೂ ಹೋರಾಟ ಮುಂದುವರೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸಿಎಂ ಬಿಎಸ್‍ವೈ-ಲಕ್ಷ್ಮಣ ಸವದಿ ಚರ್ಚೆ
ಸಾರಿಗೆ ನೌಕರರು ಮುಷ್ಕರ ಮುಂದುವರೆಸಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸವದಿ ಜತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿರಿದ್ದಾರೆ.
ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದರೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳು, ನೌಕರರ ಬೇಡಿಕೆ ಈಡೇರಿಸುವ ಕುರಿತಂತೆ ಯಡಿಯೂರಪ್ಪ ಜತೆ ಸವದಿ ಚರ್ಚೆ ನಡೆಸಿದ್ದಾರೆ. ಸಿಎಂ ಜತೆಗಿನ ಸವದಿ ನಡೆಸುತ್ತಿರುವ ಸಭೆಯ ಬಳಿಕವಷ್ಟೇ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗುತ್ತಾ, ಇಲ್ಲವಾ ಎಂಬುದು ತೀರ್ಮಾನವಾಗುವ ಸಾಧ್ಯತೆ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel